Advertisement
ಸೊಲ್ಲಾಪುರ: 2016-2018 ನೇ ಶೈಕ್ಷಣಿಕ ಸಾಲಿನ ಎಚ್‌ಎಸ್‌ಸಿ ಪರೀಕ್ಷೆಯಲ್ಲಿ ಅಕ್ಕಲ್‌ಕೋಟೆಯ ನಾಗಣಸೂರ ಗ್ರಾಮದ ಎಚ್. ಜಿ. ಪ್ರಚಂಡೆ ಶಾಲೆಯ ವಿದ್ಯಾರ್ಥಿನಿ ಧಾನಮ್ಮಾ ಫುಲಾರಿ ಅವರು ಶೇ. 87.38 ಅಂಕಗಳನ್ನು ಪಡೆದು ಕನ್ನಡ ಮಾಧ್ಯಮ ಶಾಲೆಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.
Related Articles
Advertisement
ಪರಿಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಂದಿದ್ದಳು. ಅಂತೆಯೇ ಕರ್ನಾಟಕ ಸರಕಾರ ಹೊರನಾಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿರುವ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿನೀಡಬೇಕು ಎಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮಹಾದೇವ ಲಿಂಬಿತೋಟೆ ಅವರು ತಿಳಿಸಿದ್ದಾರೆ.
ಖುಷಿ ಜೆ. ಶ್ರೀಯಾನ್‌ಗೆ ಶೇ. 97.40 ಅಂಕ
ಮುಂಬಯಿ: 2016-2017 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ದಹಿಸರ್ ಪೂರ್ವದ ಪೂರ್ಣಪ್ರಜ್ಞ ಹೈಸ್ಕೂಲ್‌ನ ವಿದ್ಯಾರ್ಥಿನಿ ಕು| ಖುಷಿ ಜೆ. ಶ್ರೀಯಾನ್ ಅವರು ಶೇ. 97.40 ಅಂಕಗಳನ್ನು ಪಡೆದು ತುಳು-ಕನ್ನಡಿಗರ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಚಿತ್ರಕಲೆ, ಭರತನಾಟ್ಯದಲ್ಲಿ ಆಸಕ್ತಿ ಹೊಂದಿರುವ ಅವರು ಶಾಲಾ ಮಟ್ಟದಲ್ಲಿ ಅತ್ಯುತ್ತಮ ವಾಲಿಬಾಲ್ ಆಟಗಾರ್ತಿಯಾಗಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದು, ಕಲಿಕೆಯಲ್ಲೂ ಮುಂಚೂಣಿಯಲ್ಲಿದ್ದಾರೆ. ಮಾಸ್ ಮೀಡಿಯಾ ವಿಷಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಅವರು ದಹಿಸರ್ ಪೂರ್ವದ ಜೈನಾಬ್‌ಭಾಗ್ ನಿವಾಸಿ, ಮೀರಾರೋಡ್ ವೋಕರ್ಡ್ ಆಸ್ಪತ್ರೆಯ ಮೆಡಿಕಲ್ ರಿಜಿಸ್ಟಾÅರ್, ಮೂಲತ: ಮೂಲೂರು ದ್ಯಾಮು ನಿವಾಸದ ಜಯೇಂದ್ರ ಶ್ರೀಯಾನ್ ಮತ್ತು ಸಸಿಹಿತ್ಲು ಮನ್ನಗುರಿ ನಿವಾಸಿ ಸರೋಜಾ ಜೆ. ಶ್ರೀಯಾನ್ ದಂಪತಿಯ ಪುತ್ರಿ.
ಪ್ರೀತಿ ಮೂಲ್ಯ ಅವರಿಗೆ ಶೇ. 91.80 ಅಂಕಮುಂಬಯಿ, ಜೂ. 13: ಶಿಸ್ತು, ಪರಿಶ್ರಮ, ಶ್ರದ್ಧೆಯನ್ನು ಮೈಗೂಡಿಸಿಕೊಂಡು ಯಾವುದೇ ಮಾಧ್ಯಮದಲ್ಲಿ ಮುನ್ನಡೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಗುರುನಾರಾಯಣ ರಾತ್ರಿಶಾಲೆಯ ವಿದ್ಯಾರ್ಥಿನಿ ಪ್ರೀತಿ ಮೂಲ್ಯ ಅವರು ಸಾಕ್ಷಿಯಾಗಿದ್ದಾರೆ. 2015-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ಗುರುನಾರಾಯಣ ರಾತ್ರಿ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಎಸ್. ಮೂಲ್ಯ ಅವರು ಶೇ. 91.80 ಅಂಕಗಳನ್ನು ಪಡೆದು ರಾಜ್ಯದಲ್ಲೇ ಕನ್ನಡ ಮಾಧ್ಯಮ ರಾತ್ರಿ ಶಾಲೆಗಳಲ್ಲಿ ಪ್ರಥಮ ಸ್ಥಾನಿಯಾಗಿ ತುಳು-ಕನ್ನಡಿಗರ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದ್ದಾರೆ. ಯಾವುದೇ ರೀತಿಯ ಟ್ಯೂಷನ್ ಕ್ಲಾಸಿಗೆ ತೆರಳದೆ ಈ ಸಾಧನೆಯನ್ನು ಮಾಡಿರುವ ಇವರು ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗಿಂತ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಕಡಿಮೆ ಇಲ್ಲ ಎಂಬುವುದನ್ನು ಸಾಬೀತುಪಡಿಸಿದ್ದಾರೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿರುವ ಇವರು ಸಾಂತಾಕ್ರೂಜ್ ಪೂರ್ವದ ನಿವಾಸಿ, ಮೂಲತಃ ನಾರಾವಿ ಶೀನ ಮೂಲ್ಯ ಮತ್ತು ಗುಡ್ಡೆಅಂಗಡಿ ಸುಮಿತ್ರಾ ಮೂಲ್ಯ ದಂಪತಿಯ ಪುತ್ರಿ. ಡೊಂಬಿವಲಿ ಕರ್ನಾಟಕ ಸಂಘದ ಮಂಜುನಾಥ ವಿದ್ಯಾಲಯಕ್ಕೆ ಶೇ. 100 ಫಲಿತಾಂಶ
ಡೊಂಬಿವಲಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯದ ಇಂಗ್ಲಿಷ್ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 91 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಂಘಿÌ ವಿರಾಜ್ ಅವರು ಶೇ. 94.60 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ರಕ್ಷಾ ಶೇs… ಮತ್ತು ಹಿಮಾನಿ ಗುಪ್ತ ಅವರು ಶೇ. 92.20 ಅಂಕಗಳನ್ನು ಪಡೆದು ದ್ವಿತೀಯ ಹಾಗೂ ಕಾರ್ತಿಕ್ ಕರ್ಕೇರ ಅವರು ಶೇ. 92 ಅಂಕಗಳನ್ನು ಗಳಿಸಿ ತೃತೀಯ ಸ್ಥಾನಿಯಾಗಿದ್ದಾರೆ. ಮಂಜುನಾಥ ವಿದ್ಯಾಲಯದ ಕನ್ನಡ ಮಾಧ್ಯಮ ಶಾಲೆಗೆ ಶೇ. 96.87 ಫಲಿತಾಂಶ ಲಭಿಸಿದೆ. 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಯಕ್ಷಿತಾ ಪೂಜಾರಿ ಅವರು ಶೇ. 91.60 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸಾœನಿಯಾಗಿದ್ದಾರೆ. ಮಾಳಿಂಗರಾಯ ಪೂಜಾರಿ ಅವರು ಶೇ. 88.20 ಅಂಕಗಳೊಂದಿಗೆ ದ್ವಿತೀಯ, ವಿಘ್ನೇಶ್ ಪೂಜಾರಿ ಅವರು ಶೇ. 87.20 ಅಂಕಗಳೊಂದಿಗೆ ತೃತೀಯ ಹಾಗೂ ಅಭಿಷೇಕ್ ಮೊಗವೀರ ಅವರು ಶೇ. 81 ಅಂಕಗಳೊಂದಿಗೆ ನಾಲ್ಕನೆ ಸ್ಥಾನ ಪಡೆದಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ಸಹಕರಿಸಿದ ಶಿಕ್ಷಕವೃಂದದವರನ್ನು, ಪಾಲಕ-ಪೋಷಕರನ್ನು ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ವಿಠಲ್ ಎ. ಶೆಟ್ಟಿ, ಗೌರವಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್ ಎಲ್. ಕುಲಾಲ್, ಕೋಶಾಧಿಕಾರಿ ಚಿತ್ತರಂಜನ್ ಎಂ. ಆಳ್ವ, ಉಪಾಧ್ಯಕ್ಷ ಡಾ| ದಿಲೀಪ್ ಖೋಪರ್ಡೆ, ಉಪ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಬಂಟರ ಸಂಘ ಸಂಚಾಲಿತ ಎಸ್. ಎಂ. ಶೆಟ್ಟಿ ಸಂಸ್ಥೆಗೆ ಶೇ. 100 ಫಲಿತಾಂಶ ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಬಂಟರ ಸಂಘ ಮುಂಬಯಿ ಸಂಚಾಲಿತ ಪೊವಾಯಿಯ ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಗೆ ಶೇ. 100 ಫಲಿತಾಂಶ ಲಭಿಸಿದೆ. ಕಳೆದ 15 ವರ್ಷಗಳಿಂದ ನಿರಂತರವಾಗಿ ಸಂಸ್ಥೆಯು ಶೇ. 100 ಫಲಿತಾಂಶವನ್ನು ಪಡೆದು ಇತಿಹಾಸ ನಿರ್ಮಿಸಿದೆ. ಪ್ರಸ್ತುತ ವರ್ಷದ ಪರೀಕ್ಷೆಗೆ ಹಾಜರಾದ 160 ವಿದ್ಯಾರ್ಥಿಗಳ ಪೈಕಿ 111 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 17 ವಿದ್ಯಾರ್ಥಿಗಳು ಶೇ. 90ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿ ವಿಶೇಷ ಸಾಧನೆಗೈದಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ಸಹಕರಿಸಿದ ಶಿಕ್ಷಕ ವೃಂದದವರನ್ನು ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಎಸ್‌ಎಂ ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಗೆ ಶೇ.100 ಫಲಿತಾಂಶ ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಫೋರ್ಟ್ ವಿದ್ಯಾದಾಯಿನಿ ಸಭಾ ಸಂಚಾಲಕತ್ವದ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪ್ರಸ್ತುತ ವರ್ಷದಲ್ಲಿ 8 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಯ ವಿದ್ಯಾರ್ಥಿ ಪರಶುರಾಮ ಶೇ. 60 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆೆ. ಮಂಗಳವಾರ ಶಾಲಾ ಸಭಾಗೃಹದಲ್ಲಿ ವಿದ್ಯಾರ್ಥಿಗಳ ಅಭಿನಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ಚಂದ್ರ ಎಂ. ಆರ್. ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾದಾಯಿನಿ ಸಭಾದ ಅಧ್ಯಕ್ಷ ಜೆ. ಎಂ. ಕೋಟ್ಯಾನ್, ಕಾರ್ಯದರ್ಶಿ ಚಿತ್ರಾಪು ಕೆ. ಎಂ. ಕೋಟ್ಯಾನ್, ಕೋಶಾಧಿಕಾರಿ ಆರ್. ಕೆ. ಕೋಟ್ಯಾನ್, ಶಾಲಾಧಿಕಾರಿ ಜಿ. ಸಿ. ಸಾಲ್ಯಾನ್ ಹಾಗೂ ಸದಸ್ಯರು, ಶಿಕ್ಷಕೇತರ ಸಿಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಪರಶುರಾಮ್ ಬಸವರಾಜ್, ಗಣೇಶ್ ಬುಂಗಪ್ಪ, ರಮೇಶ್ ತಿಮ್ಮಪ್ಪ, ದೀಪಕ್ ಪೂಜಾರಿ, ವಂದನಾ, ಭೀಮರಾವ್, ಅರ್ಜುನ್ ಪೋತೆ, ಕಿರಣ್ ಕದಂ ಮೊದಲಾದವರು ಉಪಸ್ಥಿತರಿದ್ದರು. ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯು ಕಳೆದ ಐದು ವರ್ಷಗಳಿಂದ ಶೇ. 100 ಫಲಿತಾಂಶವನ್ನು ಪಡೆಯುತ್ತಿದೆ. ವಿಕ್ರೋಲಿ: ವೀಕೇಸ್ ಇಂಗ್ಲಿಷ್ ಹೈಸ್ಕೂಲ್ ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ವಿಕ್ರೋಲಿ ಕನ್ನಡ ಸಂಘ ಸಂಚಾಲಿತ ವಿಕ್ರೋಲಿ ಪೂರ್ವದ ಠಾಕೂರ್ ನಗರದ ವೀಕೇಸ್ ಇಂಗ್ಲಿಷ್ ಹೈಸ್ಕೂಲ್‌ಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಶಾಲೆಯ ಚಿರಾಗ್ ತಿವಾರಿ ಅವರು ಶೇ. 88.40 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮಿಗರೆನಿಸಿದ್ದಾರೆ. ರಿತಿಕಾ ಉಚ್ಚಿಲ್ ಅವರು ಶೇ. 86.80 ಹಾಗೂ ಮನ್‌ಪ್ರೀತ್ ಬಾತ್ ಅವರು ಶೇ. 86.80 ಅಂಕಗಳೊಂದಿಗೆ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಸುಮಾರು 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಪಾಸಾಗಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು, ಶಾಲೆಯ ಶಿಕ್ಷಕ ವೃಂದ ಹಾಗೂ ಪಾಲಕ-ಪೋಷಕರನ್ನು ವಿಕ್ರೋಲಿ ಕನ್ನಡ ಸಂಘದ ಅಧ್ಯಕ್ಷ ಶ್ಯಾಂಸುಂದರ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ. ಗುರುನಾರಾಯಣ ರಾತ್ರಿ ಶಾಲೆ ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ಗುರುನಾರಾಯಣ ರಾತ್ರಿ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 19 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಪ್ರೀತಿ ಎಸ್. ಮೂಲ್ಯ ಅವರು ಶೇ. 91.80 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶ್ರೀದೇವಿ ಲಕ್ಷ್ಮಣ್ ಅವರು ಶೇ. 83.60 ಹಾಗೂ ಪ್ರಿಯಾಂಕಾ ಸುರೇಶ್ ಅವರು ಶೇ. 80 ಅಂಕಗಳನ್ನು ಪಡೆದು ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನವನ್ನು ಅಲಂಕರಿಸಿಕೊಂಡಿದ್ದಾರೆ. ಉತ್ತಮ ಅಂಕಗಳನ್ನು ಪಡೆಯಲು ಸಹಕರಿಸಿದ ಶಾಲಾ ಶಿಕ್ಷಕವೃಂದ ಹಾಗೂ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಹಾಗೂ ಇತರ ಪದಾಧಿಕಾರಿಗಳು, ಶಾಲಾ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ. ಚೆಂಬೂರು ಕನ್ನಡ ಮಾಧ್ಯಮ ಶಾಲೆ
ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಚೆಂಬೂರು ಕರ್ನಾಟಕ ಸಂಘದ ಸಂಚಾಲಕತ್ವದ ಚೆಂಬೂರು ಕರ್ನಾಟಕ ಹೈಸ್ಕೂಲ್ ಕನ್ನಡ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ 34 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಪೂಜಾ ಕುಂದರ್ ಅವರು ಶೇ. 90 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಕರ್ನಾಟಕ ಹೈಸ್ಕೂಲ್ ಇಂಗ್ಲಿಷ್ ಮಾಧ್ಯಮ ಶಾಲೆಗೆ ಶೇ. 99.58 ಫಲಿತಾಂಶ ಲಭಿಸಿದ್ದು, ದೀಪಕ್ ಬೋಸ್ಲೆ ಅವರು ಶೇ. 93.80 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ 243 ವಿದ್ಯಾರ್ಥಿಗಳ ಪೈಕಿ 242 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕವೃಂದ, ಪಾಲಕ ಪೋಷಕರನ್ನು ಸಂಘದ ಅಧ್ಯಕ್ಷ ನ್ಯಾಯವಾದಿ ಎಚ್. ಕೆ. ಸುಧಾಕರ, ಗೌರವ ಪ್ರಧಾನ ಕಾರ್ಯದರ್ಶಿ ರಂಜನ್ ಕುಮಾರ್ ಅಮೀನ್, ಕೋಶಾಧಿಕಾರಿ ಟಿ. ಆರ್. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ. ಭವಾನಿ ನಗರ ಶ್ರೀ ಆದಿಶಕ್ತಿ ಕನ್ನಡ ಶಾಲೆ
ಥಾಣೆ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಮಾಜಿವಾಡಾ ಭವಾನಿ ನಗರದ ಶ್ರೀ ಆದಿಶಕ್ತಿ ಕನ್ನಡ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಿಲ್ಪಾ ವಿಜಯಕುಮಾರ್ ಶೇ. 85.20 ಅಂಕಗಳನ್ನು ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ನಂದಿನಿ ಕೆ. ಬಂಗೇರ ಅವರು ಶೇ. 84.60 ಅಂಕಗಳನ್ನು ಗಳಿಸಿ ದ್ವಿತೀಯ ಹಾಗೂ ಶಶಾಂಕ್ ಪೂಜಾರಿ ಅವರು ಶೇ. 83.60 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ದರ್ಜೆ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕ ವೃಂದದವರನ್ನು ಸಂಘದ ಅಧ್ಯಕ್ಷ ಶಿಮಂತೂರು ಶಂಕರ್‌ಶೆಟ್ಟಿ, ಇತರ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. ಬೋಂಬೆ ಫೋರ್ಟ್ ನೈಟ್ ಹೈಸ್ಕೂಲ್
ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಬೋಂಬೆ ಫೋರ್ಟ್ ನೈಟ್ ಹೈಸ್ಕೂಲ್‌ಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ಆರು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆತೇರ್ಗಡೆ ಹೊಂದಿದ್ದಾರೆ. ಕುಶಾಲ್‌ಕುಮಾರ್‌ಅವರು ಶೇ.53 ಅಂಕಗಳನ್ನುಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಆರ್. ಕೆ. ಮೂಲ್ಕಿ, ಕಾರ್ಯದರ್ಶಿ ಟಿ. ಕೆ. ಕೋಟ್ಯಾನ್ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ. ಕನ್ನಡ ಮಾಧ್ಯಮ ರಾತ್ರಿ ಶಾಲೆಗಳಿಗೆ ಉತ್ತಮ ಫಲಿತಾಂಶ ಮುಂಬಯಿ: 2016-2017 ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ನಗರದಲ್ಲಿ ಕನ್ನಡ ಮಾಧ್ಯಮ ರಾತ್ರಿ ಶಾಲೆಗಳು ಉತ್ತಮ ಫಲಿತಾಂಶ ಪಡೆದಿವೆ. ಗೋರೆಗಾಂವ್‌ನ ಸರಸ್ವತಿ ನೈಟ್ ಹೈಸ್ಕೂಲ್‌ಗೆ ಶೇ. 87.50 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 8 ವಿದ್ಯಾರ್ಥಿಗಳ ಪೈಕಿ 7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೇಲ್‌ನ ಪ್ರೊಗ್ರೆಸಿವ್ ಕನ್ನಡ ನೈಟ್ ಹೈಸ್ಕೂಲ್‌ಗೆ ಶೇ. 33.33 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 3 ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಉತ್ತೀರ್ಣನಾಗಿದ್ದಾನೆೆ. ನಿಜಲಿಂಗಪ್ಪ ಕನ್ನಡ ಮಾಧ್ಯಮಿಕ ಶಾಲೆಗೆ ಶೇಕಡಾ 87.50 ಫಲಿತಾಂಶ ಮುಂಬಯಿ: 2016-2017 ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಅಂಬರ್‌ನಾಥ್ ಎಸ್. ನಿಜ ಲಿಂಗಪ್ಪ ಕನ್ನಡ ಮಾಧ್ಯಮಿಕ ಶಾಲೆಗೆ ಶೇ. 87.50 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿಗಳು ಉತ್ತೀರ್ಣ
ರಾಗಿದ್ದಾರೆ. ನಾಗಮ್ಮಾ ಆನಂದಪ್ಪ ನಲಗಟೆ ಅವರು ಶೇ. 86.80 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು, ರಮೇಶ್ ಶ್ರೀನಿವಾಸ ವಾಲ್ಮೀಕಿ ಮತ್ತು ಪ್ರಿಯಾಂಕಾ ಅಪ್ಪ ರಾಥೋಡ್ ಅವರು ಶೇ. 72 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 9 ವಿದ್ಯಾರ್ಥಿಗಳು ಪ್ರಥಮ ದರ್ಜೆ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿ ಗಳನ್ನು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಆರ್. ಬಿ. ಹೆಬ್ಬಳ್ಳಿ ಹಾಗೂ ಇತರ ಪದಾಧಿ
ಕಾರಿಗಳು, ಮುಖ್ಯ ಶಿಕ್ಷಕ ವಿಜಯಕುಮಾರ್ ಖಾದಿ ಅವರು ಅಭಿನಂದಿಸಿದ್ದಾರೆ. ಬಂಟರ ಸಂಘ ಸಂಚಾಲಿತ ರಾತ್ರಿ ಶಾಲೆಗಳಿಗೆ ಉತ್ತಮ ಫಲಿತಾಂಶ ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಬಂಟರ ಸಂಘ ಮುಂಬಯಿ ಸಂಚಾಲಿತ ವರ್ಲಿಯ ನಿತ್ಯಾನಂದ ನೈಟ್ ಹೈಸ್ಕೂಲ್‌ಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ಎಂಟು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಸಂಘದ ಘಾಟ್ಕೊàಪರ್ ಕರ್ನಾಟಕ ಫ್ರೀ ನೈಟ್ ಹೈಸ್ಕೂಲ್‌ಗೆ ಶೇ. 92 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಉತ್ತಮ ಅಂಕಗಳನ್ನು ಪಡೆಯಲು ಸಹಕರಿಸಿದ ಸಂಸ್ಥೆಯ ಶಿಕ್ಷಕವೃಂದ, ವಿದ್ಯಾರ್ಥಿಗಳು ಹಾಗೂ ಸಂಘದ ಶಿಕ್ಷಣ ಸಮಿತಿಯನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ. ಕನ್ನಡ ಸಂಘ ಪುಣೆ ಕನ್ನಡ ಮಾಧ್ಯಮ ಹೈಸ್ಕೂಲ್: ಶೇ. 98.05 ಫಲಿತಾಂಶ
ಪುಣೆ: ಕನ್ನಡ ಸಂಘ ಪುಣೆ ವತಿಯಿಂದ ನಡೆಸಲ್ಪಡುವ ಡಾ| ಶಾಮರಾವ್ ಕಲ್ಮಾಡಿ ಕನ್ನಡ ಮಾಧ್ಯಮ ಹೈಸ್ಕೂಲಿಗೆ ಈ ಬಾರಿಯ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 98.05 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 67 ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 19 ವಿದ್ಯಾರ್ಥಿಗಳು ಪ್ರಥಮ ದರ್ಜೆ, 29 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೊನ್ನಪ್ಪ ಹಯ್ನಾಳಪ್ಪ ಯಗಚಿಂತಿ ಅವರು ಶೇ. 90.08 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಕನ್ನಡ ಸಂಘದ ಅಧ್ಯಕ್ಷ ಕುಶಲ್ ಹೆಗ್ಡೆ, ಉಪಾಧ್ಯಕ್ಷರಾದ ಇಂದಿರಾ ಸಾಲ್ಯಾನ್, ನಾರಾಯಣ ಹೆಗಡೆ, ಕಾರ್ಯದರ್ಶಿ ಮಾಲತಿ ಕಲ್ಮಾಡಿ, ವಿಶ್ವಸ್ತರು, ಕನ್ನಡ ಮಾಧ್ಯಮ ಹೈಸ್ಕೂಲ್ ಪ್ರಾಚಾರ್ಯರಾದ ಚಂದ್ರಕಾಂತ ಹರ್ಕುಡೆ ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ಬೊರಿವಿಲಿ ಸೈಂಟ್ ಕ್ಸೇವಿಯರ್ ಹೈಸ್ಕೂಲ್‌ಗೆ ಶೇ. 99.67 ಫಲಿತಾಂಶ
ಮುಂಬಯಿ: 2016-2017ನೇ ಶೈಕ್ಷಣಿಕ ಸಾಲಿನ ಸೆಕೆಂಡರಿ ಸ್ಕೂಲ್ ಸರ್ಟಿಫಿಕೇಟ್ ಎಸ್‌ಎಸ್‌ಸಿ ಬೋರ್ಡ್ ಫಲಿತಾಂಶವನ್ನು ಮಹಾರಾಷ್ಟ್ರ ಶಿಕ್ಷಣ ಮಂಡಳಿಯು ಮಂಗಳವಾರ ಮಧ್ಯಾಹ್ನ ಪ್ರಕಟಿಸಿದ್ದು, ರಾಯನ್ ಇಂಟರ್‌ನ್ಯಾಷನಲ್ ಸಮೂಹ ಶೈಕ್ಷಣಿಕ ಸಂಸ್ಥೆಯ ಪ್ರೌಢಶಾಲೆಗಳಲ್ಲಿ ಒಂದಾದ ಬೊರಿವಿಲಿ ಪೂರ್ವದ ಸೈಂಟ್ ಕ್ಸೇವಿಯರ್ ಹೈಸ್ಕೂಲ್‌ಗೆ ಶೇ. 99.67 ಫಲಿತಾಂಶ ಲಭಿಸಿದೆ. ಶೇ. 96 ಅಂಕಗಳೊಂದಿಗೆ ಕು| ಅಕ್ಷತಾ ಆರ್. ಕೊಲ್ತಾಕರ್ ಎಂಬ ವಿದ್ಯಾರ್ಥಿನಿ ಶಾಲೆಯಲ್ಲೇ ಪ್ರಥಮಿಗರೆನಿಸಿದ್ದಾರೆ. ಕು| ಮೆಘನಾ ರಾಜೇಶ್ ಅಂತಿಕಾಡ್ ಹಾಗೂ ಕೃತಿ ಜತಿನ್ ಶಾØ ಅವರು ಶೇ. 94 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ತುಳು-ಕನ್ನಡ ವಿದ್ಯಾರ್ಥಿನಿ ಕು| ಮಾನ್ವಿತಾ ಡಿ. ಅಂಚನ್ ಅವರು ಶೇ. 93.40 ಅಂಕಗಳೊಂದಿಗೆ 3ನೇ ಸ್ಥಾನ ಗಳಿಸಿದ್ದಾರೆ. ಇವರು ಮಂಗಳೂರಿನ ಮಣ್ಣಗುಡ್ಡೆ ಮೂಲದ ದೇವದಾಸ್ ಅಂಚನ್ ಮತ್ತು ಮಂಗಳೂರು ಅತ್ತಾವರ ಮೂಲದ ಯಾಮಿನಿ ಅಂಚನ್ ದಂಪತಿಯ ಪುತ್ರಿ.ಪರೀಕ್ಷೆ ಬರೆದ ಎಲ್ಲಾ ತುಳು-ಕನ್ನಡಿಗ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ ಎಂದು ಬಂಟ್ವಾಳ ಮೂಲದ ಶಾಲೆಯ ಪ್ರಾಂಶುಪಾಲೆ ಮಾರಿಯೆಟ್ ಫೆರ್ನಾಂಡಿಸ್ ತಿಳಿಸಿದ್ದಾರೆ.