ಧಾರವಾಡ: ಭಾರತರತ್ನ ಡಾ|ಬಿ.ಆರ್. ಅಂಬೇಡ್ಕರ್ ಅವರು ಮಾದರಿಯಾಗಿದ್ದು, ಅವರ ಜೀವನ, ಸಾಧನೆ ಮತ್ತು ಅವರು ಪಾಲಿಸಿದ ಜೀವನ ಮೌಲ್ಯಗಳು ನಮಗೆ ಸ್ಫೂರ್ತಿದಾಯಕವಾಗಿವೆ ಎಂದು ಜಿಲ್ಲಾಧಿ ಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|ಬಿ. ಆರ್.ಅಂಬೇಡ್ಕರ್ ಅವರ 130ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ|ಬಿ.ಆರ್.ಅಂಬೇಡ್ಕರ್ ಅವರು ಓರ್ವ ಪ್ರತಿಭಾವಂತ ವಿದ್ಯಾರ್ಥಿಯಾಗಿ ಅಗಾಧ ಸಾಧನೆ ಮಾಡಿದ್ದಾರೆ.
ಅವರ ಜೀವನ-ಸಾಧನೆಗಳು ಪ್ರತಿಯೊಬ್ಬರಿಗೂ ಅಮೂಲ್ಯವಾಗಿವೆ. ಇಡಿ ವಿಶ್ವಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ಭಾರತಕ್ಕೆ ನೀಡಿದ್ದಾರೆ. ಅವರ ಚಿಂತನೆ-ಮೌಲ್ಯಗಳ ಪಾಲನೆಯೊಂದಿಗೆ ನಾವೆಲ್ಲರೂ ಮುನ್ನಡೆಯೋಣ ಎಂದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ಡಾ|ಸುಶೀಲಾ.ಬಿ ಅವರು ಡಾ|ಬಿ. ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು. ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಜಿಪಂ ಉಪಕಾರ್ಯದರ್ಶಿ ಎಸ್.ಎಮ್. ಕುಂದೂರ, ಮುಖ್ಯ ಯೋಜನಾ ಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್.ಮೂಗನೂರಮಠ, ಜಿಲ್ಲಾ ಆರೋಗ್ಯ ಅಧಿ ಕಾರಿ ಡಾ|ಯಶವಂತ ಮದಿನಕರ, ಆರ್‌ಸಿಎಚ್‌ಒ ಡಾ|ಎಸ್. ಎಂ.ಹೊನಕೇರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್.ಪುರುಷೋತ್ತಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿ ಕಾರಿ ಅಜ್ಜಪ್ಪ ಸೊಗಲದ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಸಮುದಾಯ ಮುಖಂಡರು, ವಿವಿಧ ಸಂಘಟನೆಗಳ ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಕಟಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಜನರ ಯೋಜನೆಗಳ ಕೈಪಿಡಿಯನ್ನು ಜಿಲ್ಲಾಧಿ ಕಾರಿಗಳು ಮತ್ತು ಜಿಪಂ ಸಿಇಒ ಬಿಡುಗಡೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 9 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಮತ್ತು 2020-21 ನೇ ಸಾಲಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ 8 ಜನ ಗಣ್ಯರಿಗೆ ಜಿಲ್ಲಾಧಿ ಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ಡಾ|ಸುಶೀಲಾ.ಬಿ. ಅವರು ಸನ್ಮಾನಿಸಿ, ಅಭಿನಂದನ ಪತ್ರ ನೀಡಿ ಗೌರವಿಸಿದರು.
ಅಪರ ಜಿಲ್ಲಾಧಿ ಕಾರಿ ಶಿವಾನಂದ ಕರಾಳೆ ಅವರು ಡಾ|ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮಶೀಲತಾ ಯೋಜನೆಯಡಿ ಆಯ್ಕೆಯಾಗಿರುವ 5 ಜನ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ಹಾಗೂ ಚೆಕ್ ವಿತರಿಸಿದರು. ಪಿಎಚ್‌ಡಿ ಪದವಿ ಪಡೆದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್ .ಪುರುಷೋತ್ತಮ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿ ಕಾರಿ ನಿತೇಶ ಪಾಟೀಲ, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿ ಕಾರಿ ಡಾ|ಸುಶೀಲಾ.ಬಿ ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿ ಇರುವ ಡಾ|ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ, ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು