Advertisement

Hubballi ; ಸಿಎಂ ಸಿದ್ದರಾಮಯ್ಯ,ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ

07:25 PM Sep 15, 2023 | Team Udayavani |

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನಕಾರರು ರಸ್ತೆ ತಡೆ ನಡೆಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾವಚಿತ್ರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹನ ಮಾಡಿದರು.

Advertisement

ಅನುಮತಿಗಾಗಿ ನಿನ್ನೆಯಿಂದ ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳ ಪ್ರಮುಖರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಅಂಜುಮನ್ ಸಂಸ್ಥೆಯು ಅನುಮತಿ ನೀಡಿದ್ದ ಪಾಲಿಕೆ ಠರಾವು ವಿರೋಧಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಅನುಮತಿ ದೊರೆಯುವ ನಿರೀಕ್ಷೆ ಹೆಚ್ಚಾಗಿತ್ತು. ಆದರೆ ಮಹಾನಗರ ಪಾಲಿಕೆ ಆಯುಕ್ತರು ಅನುಮತಿ ನೀಡುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿ ಲ್ಯಾಮಿಂಗ್ಟನ್ ರಸ್ತೆ ತಡೆ ನಡೆಸಿದರು. ಈ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವಚಿತ್ರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆ ಆಯುಕ್ತರು ಆಗಮಿಸಿ ಅನುಮತಿ ನೀಡದ ಕಾರಣ ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಭಜನೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next