Advertisement

ಹುಬ್ಬಳ್ಳಿ :ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಪತ್ನಿ

08:54 PM Jan 09, 2022 | Team Udayavani |

ಹುಬ್ಬಳ್ಳಿ: ಇಲ್ಲಿನ ಹಳೇ ಬಸ್ ನಿಲ್ದಾಣ ಎದುರಿನ ಡಮ್ಮಣಗಿ ಕಂಫಟ್ಸ್೯ ಲಾಡ್ಜ್ ನಲ್ಲಿ ಮೈಸೂರು ಮೂಲದ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ನೆಲಮಂಗಲದಲ್ಲಿ ಪರಿಸರ ಅಭಿಯಂತರಾದ ಮೈಸೂರು ಮೂಲದ ಶಾಂತಲಾ ಸುಪ್ರೀತ ಬೆಳಗಾವಿ (43) ನೇಣಿಗೆ ಶರಣಾಗಿದ್ದಾರೆ.

ಅಕ್ಟೋಬರ್ ನಲ್ಲಿ ಇವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಅಲ್ಲದೆ ಇವರಿಗೆ ಬೆನ್ನುನೋವಿನ ಸಮಸ್ಯೆ ಕಾಡುತ್ತಿತ್ತು, ಇದರಿಂದ ಮನನೊಂದು ಶಾಂತಲಾ ಅವರು ಡೆತ್ ನೋಟ್ ಬರೆದಿಟ್ಟು ತಮ್ಮ ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲಿ ರವಿವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಚಿವ ನಾರಾಯಣ ಗೌಡ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next