Advertisement

ಮಹಾನಗರ ಪಾಲಿಕೆ ಚುನಾವಣೆ: 60ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ|ಕಟೀಲ್‌

05:30 PM Sep 01, 2021 | Team Udayavani |

ಧಾರವಾಡ: ಹು-ಧಾ ಅವಳಿನಗರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದಲೇ ಈ ಚುನಾವಣೆಯಲ್ಲಿ ಬಿಜೆಪಿ 60 ರಿಂದ 62 ಸ್ಥಾನ ಗೆದ್ದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್‌ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಕಲಬುರ್ಗಿ ಹಾಗೂ ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ. ಮೂರೂ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಮನೆ ಮನೆಗೆ ಮಹಾನಗರ ಪಾಲಿಕೆ ಎಂಬ ಧ್ಯೇಯೋದ್ದೇಶ ಇಟ್ಟುಕೊಂಡು ಚುನಾವಣೆಗೆ ಇಳಿದಿದ್ದೇವೆ ಎಂದರು.

ಹು-ಧಾ ಪಾಲಿಕೆಯಲ್ಲಿ ಹತ್ತು ವರ್ಷ ಬಿಜೆಪಿ ಅಧಿಕಾರ ನಡೆಸಿದೆ. ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಮುನ್ನುಡಿ ಬರೆದಿದ್ದೇ ಬಿಜೆಪಿ. ಸ್ಮಾರ್ಟ್‌ಸಿಟಿ ಯೋಜನೆ, ಅಮೃತ ಯೋಜನೆ, ಮನೆ ಮನೆಗೆ ಗಂಗೆ, ಮನೆ ಮನೆಗೆ ಗ್ಯಾಸ್‌ ಯೋಜನೆ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಅವಳಿನಗರಕ್ಕೆ ಸಾಕಷ್ಟು ಅನುದಾನ ತಂದು ಕೆಲಸ ಮಾಡಲಾಗಿದೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ ಸಾಕಷ್ಟು ಅನುದಾನ ತಂದು ವಾರ್ಡ್‌ ಗಳ ಅಭಿವೃದ್ಧಿ, ನಗರ ಸೌಂದರ್ಯಿಕರಣ ಮಾಡಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಕೂಡ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಕಾಲ ಅವಳಿನಗರ ಸ್ಮಾರ್ಟ್‌ ನಗರಗಳಾಗಿ ಬೆಳೆಯುವುದರಲ್ಲಿ ಯಾವುದೇ ಸಂದೇಹವಿಲ್ಲ. ನನೆಗುದಿಗೆ ಬಿದ್ದ ಎಲ್ಲಾ ಕಾಮಗಾರಿಗಳು ಮುಂದಿನ ದಿನಗಳಲ್ಲಿ ಪೂರ್ಣಗೊಳ Ûಲಿವೆ ಎಂದರು.

ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂಬುದು ಜನರ ಕೂಗು ನಮ್ಮ ಕೂಗಲ್ಲ. ಅವಳಿ ಮಕ್ಕಳನ್ನು ನಾವು ಬೇರೆ ಮಾಡಿದಂತಾಗುತ್ತದೆ. ಜನರ ಅಭಿಪ್ರಾಯದ ಮೇರೆಗೆ ಪ್ರತ್ಯೇಕ ಮಹಾನಗರ ಪಾಲಿಕೆ ಬಗ್ಗೆ ನಾವು ಮುಂದುವರಿಯುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಮೃತ ದೇಸಾಯಿ, ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ತವನಪ್ಪ ಅಷ್ಟಗಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next