ಹುಬ್ಬಳ್ಳಿ: ನಗರದ ಹೊರವಲಯದ ರೇವಡಿಹಾಳ ಕ್ರಾಸ್ ಮೇಲ್ಸೇತುವೆ ಬಳಿ ಖಾಸಗಿ ಬಸ್ ಮತ್ತು ಅಕ್ಕಿ ಚೀಲ ಹೇರಿಕೊಂಡು ಹೊರಟಿದ್ದ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೇರಿದೆ.
ಬಸ್ ಚಾಲಕನು ಟ್ರ್ಯಾಕ್ಟರ್ ಹಿಂದಿಕ್ಕಿ ಮುಂದೆ ಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಲಾರಿಯು ಟ್ರ್ಯಾಕ್ಟರ್ ಮೇಲೆ ವಾಲಿಬಿದ್ದಿದ್ದು, ಅದೃಷ್ಟವಶಾತ್ ಅದರಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.
ಇದನ್ನೂ ಓದಿ:ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ
ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜ, ಪ್ರಯಾಣಿಕರಾದ ಇಚಲಕರಂಜಿಯ ಬಾಬಾಸಾ ಅಣ್ಣಾಸಾ ಚೌಗಲೆ, ಚಿಕ್ಕೋಡಿಯ ಬಾಬೂಸಾಬ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದಾರೆ. ಆರು ಜನ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಉಳಿದವರ ಹೆಸರು ಇನ್ನಷ್ಟೇ ತಿಳಿದುಬರಬೇಕಿದೆ.
Related Articles
ಅಪಘಾತದಲ್ಲಿ ಗಾಯಗೊಂಡವರೆಲ್ಲ ಬಹುತೇಕರೆಲ್ಲ ಬಸ್ಸಿನ ಪ್ರಯಾಣಿಕರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಚ್ ಡಿಕೆ ಕಳವಳ: ಹುಬ್ಬಳ್ಳಿ ಹೊರ ವಲಯದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಳೆದ ತಡರಾತ್ರಿ ಸಂಭವಿಸಿರುವ ಈ ದುರಂತದಲ್ಲಿ 26 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಅಸುನೀಗಿದ ನತದೃಷ್ಟರೆಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ಆವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ, ಗಾಯಾಳುಗಳೆಲ್ಲ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಪಘಾತ ಸಂಭವಿಸಿದ ಕೊಲ್ಹಾಪುರ-ಹುಬ್ಬಳ್ಳಿ ಹೆದ್ದಾರಿಯ ಈ ಜಾಗದಲ್ಲಿ ಪದೇಪದೆ ದುರಂತಗಳು ಸಂಭವಿಸುತ್ತಿವೆ, ಅದು ‘ಸಾವಿನ ಹೆದ್ದಾರಿ’ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಮತ್ತೆ ಅಪಘಾತಗಳು ಸಂಭವಿಸದಂತೆ ತಡೆಯಬೇಕು ಎಂದು ಆಗ್ರಹಿಸಿದ್ದಾರೆ.
– H D Kumaraswamy (@h_d_kumaraswamy) 24 May 2022