Advertisement

ಮೇ.1 ರಿಂದ ಹುಬ್ಬಳ್ಳಿಯಿಂದ ಮಂಗಳೂರು, ಮೈಸೂರಿಗೆ ಸಂಪರ್ಕ ಕಲ್ಪಿಸುವ ವಿಮಾನ ಸೇವೆ ಆರಂಭ

09:12 PM Apr 08, 2022 | Team Udayavani |

ನವದೆಹಲಿ : ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭಸುದ್ದಿ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭವಾಗಲಿದೆ.

Advertisement

ಇದೇ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭವಾಗಲಿದೆ.

ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಅದರಂತೆ ಸಚಿವರ ಮನವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆ ಹುಬ್ಬಳ್ಳಿಯಿಂದ ಮಂಗಳೂರು ಹಾಗೂ ಮೈಸೂರಿಗೆ ಮೇ. 1ರಿಂದ ಸೇವೆ ಒದಗಿಸುವುದಾಗಿ ತಿಳಿಸಿದೆ.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವರು ಧನ್ಯವಾದಗಳನ್ನು ತಿಳಿಸಿದ್ದಾರೆ.

Advertisement

ಇದನ್ನೂ ಓದಿ : ಬಂಟ್ವಾಳ: ಉಪವಾಸ ಬಿಡಲು ಮನೆಗೆ ತೆರಳುತ್ತಿದ್ದ ಸಹೋದರರಿಗೆ ಕಾರು ಢಿಕ್ಕಿ; ಆಸ್ಪತ್ರೆಗೆ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next