Advertisement

Hubballi: ಬಿಜೆಪಿ ವಾಪಸ್‌ ಪಡೆದ ಕೇಸ್‌ ಪಟ್ಟಿ ಕೊಡುತ್ತೇವೆ: ಡಿ.ಕೆ.ಶಿವಕುಮಾರ್‌

12:46 AM Oct 14, 2024 | Team Udayavani |

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಘಟನೆಯಲ್ಲಿ ಪ್ರಕರಣ ದಾಖಲಾಗಿದ್ದವರು ಯಾವುದೇ ದುಷ್ಕೃತ್ಯದಲ್ಲಿ ಭಾಗಿಯಾಗಿಲ್ಲವೆಂದು ಸಾಬೀತಾಗಿದೆ. ಹೀಗಾಗಿ ಪ್ರಕರಣವನ್ನು ಹಿಂಪಡೆಯಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಪ್ರತೀ ಹಂತದಲ್ಲೂ ರಾಜಕಾರಣ ಮಾಡುತ್ತಾರೆ. ಅವರು ಎಷ್ಟು ಪ್ರಕರಣ ವಾಪಸ್‌ ತೆಗೆದುಕೊಂಡಿದ್ದಾರೆ? ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್‌, ಬಜರಂಗ ದಳದವರು ಸೇರಿದಂತೆ ಎಲ್ಲರ ಮೇಲಿನ ಅಹಿತಕರ ಚಟುವಟಿಕೆಗಳ ಪ್ರಕರಣ ವಾಪಸ್‌ ಪಡೆದಿದ್ದಾರೆ. ಅದರ ಪಟ್ಟಿ ನಾವು ಕೊಡುತ್ತೇವೆ.

ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ರಾಜಕೀಯ ಒತ್ತಡದಲ್ಲಿ ಆಗ ಪೊಲೀಸರು ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಅವರು ಭಾಗಿಯಾಗಿಲ್ಲ ಎಂದು ಖಚಿತವಾದ ಮೇಲೆ ನಾವು ವಾಪಸ್‌ ಪಡೆದುಕೊಂಡಿದ್ದೇವೆ. ನಾವು ಅವರಿಗೆ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next