Advertisement

ಮೋದಿ ಆಗಮನ ಹಿನ್ನೆಲೆ: ಈದ್ಗಾ ಮೈದಾನದಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ ಅರ್ಜಿ ತಿರಸ್ಕಾರ

12:59 PM Mar 09, 2023 | Team Udayavani |

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಇಲ್ಲಿನ ಈದ್ಗಾ ಮೈದಾನದಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಳಿ ಆಚರಣೆಗೆ ಅವಕಾಶ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪಾಲಿಕೆ ತಿರಸ್ಕರಿಸಿದೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಮಾತನಾಡಿ, ಧಾರವಾಡ ಐಐಟಿ ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಅಲ್ಲಿಗೆ ವಹಿಸಲಾಗಿರುತ್ತದೆ. ಅಲ್ಲದೆ ಅರ್ಜಿಯನ್ನು ತಡವಾಗಿ ನೀಡಿದ್ದಾರೆ. ಹೀಗಾಗಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ. ಅರ್ಜಿ ಸಲ್ಲಿಸಿದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ಮನವರಿಕೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ಅರ್ಜಿ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರ ಬಲೂನ್ ಪತ್ತೆ: ಬಲೂನ್ ಒಳಗೆ ಎಲೆಕ್ಟ್ರಾನಿಕ್ ವಸ್ತು, ಬ್ಯಾಟರಿ

ಮಹಾನಗರ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಮಾತನಾಡಿ, ಯಾವುದೇ ಬಂದೋಬಸ್ತ್ ಅಥವಾ ವ್ಯವಸ್ಥೆ ಕಲ್ಪಿಸಲು ಕನಿಷ್ಠ 10 ದಿನಗಳು ಬೇಕಾಗುತ್ತದೆ. ಅರ್ಜಿಯನ್ನು ಸಕಾಲದಲ್ಲಿ ನೀಡಿಲ್ಲ. ಈಗಾಗಲೇ ಮಹಾನಗರದಲ್ಲಿ 472 ಕಾಮಣ್ಣ ಮೂರ್ತಿ ಪ್ರತಿಷ್ಠಾನೆ ಆಗಿವೆ. ಅಲ್ಲಿಯೂ ಭದ್ರತೆ ನೀಡಲಾಗಿದೆ. ಪ್ರಧಾನ ಮಂತ್ರಿಗಳ ಕಾರ್ಯಕ್ರಮದ ಭದ್ರತಗೆ ಮೊದಲ ಆದ್ಯತೆ ನೀಡಲಾಗಿದೆ. ಭದ್ರತೆ ಹಾಗೂ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದರು.

ಮಾ.7 ರಂದು ಅರ್ಜಿ: ಈದ್ಗಾ ಮೈದಾನದಲ್ಲಿ ಕಾಮಣ್ಣ ಪ್ರತಿಷ್ಠಾಪನೆ ಹಾಗೂ ಹೋಳಿ ಆಚರಣೆಗೆ ಅವಕಾಶ ಕೋರಿ ರಾಣಿ ಚನ್ನಮ್ಮಾ ಮೈದಾನ ಗಜಾನನ ಉತ್ಸವ ಮಹಾಮಂಡಳವು ಮಾ.7 ರಂದು ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಮೇಯರ್ ಈರೇಶ ಅಂಚಟಗೇರಿ ಅರ್ಜಿ ಪರಿಶೀಲನೆಗೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು. ಆದರೆ ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅರ್ಜಿಯನ್ನು ಪಾಲಿಕೆ ತಿರಸ್ಕರಿಸಲಾಗಿದೆ. ಇದಕ್ಕೂ ಮೊದಲು ಪಾಲಿಕೆ ಆಯುಕ್ತ ಹಾಗೂ ಮಹಾನಹರ ಪೊಲೀಸ್ ಆಯುಕ್ತರು ಸುದೀರ್ಘ ಚರ್ಚೆ ನಡೆಸಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next