Advertisement

Hubli; ಖಾಸಗಿ ಬಸ್ ಪಲ್ಟಿಯಾಗಿ 14 ಮಂದಿಗೆ ಗಾಯ

12:45 PM Oct 19, 2023 | Team Udayavani |

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪಲ್ಟಿಯಾಗಿ 14 ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಪಾಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

Advertisement

ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸಣ್ಣಪುಟ್ಟ ಗಾಯಗೊಂಡಿದ್ದ 11 ಜನರು ಪ್ರಥಮ ಚಿಕಿತ್ಸೆ ಪಡೆದು ತೆರಳಿದ್ದು, ಹೆಚ್ಚಿನ ಗಾಯಗೊಂಡಿರುವ ಪುಣೆ, ಕೋಲ್ಕತ್ತಾ ಮತ್ತು ಹುಬ್ಬಳ್ಳಿಯ ತಲಾ ಒಬ್ಬರು ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:Israel Hamas War: ಬೈಡೆನ್‌ ಬೆನ್ನಲ್ಲೇ ಇಸ್ರೇಲ್ ಗೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ…

ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಎಸ್‌ಪಿ ಹಾಗೂ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next