Advertisement
ಕಳೆದ ವಾರವಷ್ಟೇ ರಾಜ್ಯ ವನ್ಯಜೀವಿ ಮಂಡಳಿ ಯೋಜನೆ ಕೈಬಿಡುವ ನಿರ್ಧಾರ ಪ್ರಕಟಿಸಿತ್ತು. ಆದರೆ ಈಗ ಹಿಂದಿನ ನಿರ್ಧಾರ ವಾಪಸ್ ಪಡೆದು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಮಂಡಳಿ ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ.
Related Articles
ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಿರುವುದನ್ನು ಖಂಡಿಸಿ, ಶಾಸಕಿ ಸೌಮ್ಯಾ ರೆಡ್ಡಿ ಮಂಡಳಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Advertisement
ಪರಿಸರವಾದಿಗಳ ವಾದಹುಬ್ಬಳ್ಳಿ-ಅಂಕೋಲಾ ರೈಲು ಹಾದು ಹೋಗುವ ಪ್ರದೇಶ ಸಂಪೂರ್ಣ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರುವುದರಿಂದ ಸುಮಾರು 595 ಹೆಕ್ಟೇರ್ ಅರಣ್ಯ ನಾಶವಾಗುತ್ತದೆ. ಸುಮಾರು 5 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ. ಅಲ್ಲದೆ ಈ ಪ್ರದೇಶ ಜೀವ ವೈವಿಧ್ಯ ತಾಣವಾಗಿದ್ದು, ಆನೆ ಕಾರಿಡಾರ್ ಕೂಡ ಹಾದುಹೋಗಿದೆ. ಅನೇಕ ಅಳಿವಿನಂಚಿನಲ್ಲಿರುವ ವನ್ಯ ಪ್ರಾಣಿಗಳ ವಾಸಸ್ಥಾನವಾಗಿರುವುದರಿಂದ ಈ ಯೋಜನೆ ಕೈಗೆತ್ತಿಕೊಳ್ಳುವುದರಿಂದ ಜೀವ ವೈವಿಧ್ಯಕ್ಕೆ ಹಾನಿಯಾಗುತ್ತದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ -ಅಂಕೋಲಾ ರೈಲು ಯೋಜನೆಗೆ ಸಾಕಷ್ಟು ಹೋರಾಟ ಮಾಡಲಾಗಿದೆ. ಮಂಡಳಿ ಸಭೆಯಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದರು. ಆದರೆ ಈ ಯೋಜನೆ ಜಾರಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಔದ್ಯೋಗಿಕ ಮತ್ತು ರಪು¤ ಉದ್ಯಮಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿಯೇ ಈ ಯೋಜನೆಗೆ ಶಂಕು ಸ್ಥಾಪನೆ ಮಾಡಲಾಗಿದೆ.
– ಜಗದೀಶ್ ಶೆಟ್ಟರ್, ಕೈಗಾರಿಕಾ ಸಚಿವ