ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಮಹಾನಗರ ಮತ್ತು ಗ್ರಾಮಾಂತರ ಘಟಕದಿಂದ ಇಲ್ಲಿನ ಹಳೆ ಕೋರ್ಟ್ ವೃತ್ತ ಬಳಿ ಒಂದು ಕ್ವಿಂಟಲ್ ಸೇಬು, ಎರಡು ಕ್ವಿಂಟಲ್ ಚಂಡು ಹೂವು ಮತ್ತು ಗುಲಾಬಿ ಹೂವಿನಿಂದ ತಯಾರಿಸಿದ 30 ಅಡಿ ಉದ್ದದ ಬೃಹತ್ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಿದರು.
ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ದೇಶಪಾಂಡೆ ನಗರದ ಪಕ್ಷದ ಕಚೇರಿವರೆಗೆ ಬರಮಾಡಿಕೊಂಡರು.
ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮಾಂತರ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಬಸವರಾಜ ಕುಂದಗೋಳಮಠ, ಪ್ರಭು ನವಲಗುಂದಮಠ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಉಮಾ ಮುಕುಂದ, ರೂಪಾ ಶೆಟ್ಟಿ, ಚಂದ್ರಿಕಾ ಮೇಸ್ತ್ರಿ, ಸರಸ್ವತಿ ಲದವಾ, ರಂಗಾ ಬದ್ದಿ, ಅಶೋಕ ವಾಲ್ಮೀಕಿ, ವೆಂಕಟೇಶ ಕಾಟವೆ, ಮಾರುತಿ ಚಾಕಲಬ್ಬಿ, ಈಶ್ವರಗೌಡ ಪಾಟೀಲ, ನಾರಾಯಣ ಜರತಾರಘರ, ಸಿದ್ದು ಮೊಗಲಿಶೆಟ್ಟರ, ಮಹೇಂದ್ರ ಕೌತಾಳ, ಅನೂಪ ಬಿಜವಾಡ, ಪಕ್ಷದ ಮಹಿಳೆಯರು, ಮುಖಂಡರು ಮತ್ತು ಕಾರ್ಯಕರ್ತರು ಇದ್ದಾರೆ.
ಈ ವೇಳೆ ಮೆರವಣಿಗೆಯ ಮಾರ್ಗದುದ್ದಕ್ಕೂ ಅಲ್ಲಲ್ಲಿ ಆರು ಕಡೆಗಳಲ್ಲಿ ಬೃಹತ್ ಗಾತ್ರದ ಹಾರಗಳನ್ನು ಹಾಕಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.