Advertisement
ಗೋಕುಲರಸ್ತೆ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣಗಳಲ್ಲಿ ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು. ಆಟೋರಿಕ್ಷಾಗಳ ಸಂಚಾರ ಅತ್ಯಂತ ವಿರಳವಾಗಿತ್ತು. ಲಭ್ಯವಿದ್ದ ಕೆಲವು ಆಟೋರಿಕ್ಷಾಗಳು ಜನರಿಂದ ದುಪ್ಪಟ್ಟು, ಮೂರು ಪಟ್ಟುಹಣ ಪಡೆಯುತ್ತಿದ್ದು ಕಂಡು ಬಂದಿತು.
Related Articles
Advertisement
ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು ಚನ್ನಮ್ಮ ವೃತ್ತಕ್ಕೆ ಆಗಮಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದರು. ಅಮಿತ್ ಶಾ ಬಹಿರಂಗ ಕ್ಷಮೆಯಾಚಿಸಬೇಕು. ಪ್ರಧಾನಿ ಮೋದಿಯವರು ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.