Advertisement

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣ ಹೊಸ ಟರ್ಮಿನಲ್‌ ಕಾಮಗಾರಿಗೆ ಮೋದಿ ಚಾಲನೆ

05:43 PM Mar 11, 2024 | Team Udayavani |

ಬೆಳಗಾವಿ/ಹುಬ್ಬಳ್ಳಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ 350 ಕೋಟಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 340 ಕೋಟಿ ವೆಚ್ಚದಲ್ಲಿ ಹೊಸ ಟರ್ಮಿನಲ್‌ ಕಾಮಗಾರಿಗಳ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಚು ವಲ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಎರಡೂ ವಿಮಾನ ನಿಲ್ದಾಣಗಳನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

Advertisement

ಬೆಳಗಾವಿ ವಿಮಾನ ನಿಲ್ದಾಣ ಎದುರು ರಾಣಿ ಚನ್ನಮ್ಮನ ಪ್ರತಿಮೆ ಪ್ರತಿಷ್ಠಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುಮತಿ ದೊರೆತಿದೆ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಏನೇನು ಸೌಲಭ್ಯ?: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ 4 ಏರೋಬ್ರಿಡ್ಜ್, ತಲಾ 8 ಎಸ್ಕ್ಲೇಟರ್‌, ಲಿಫ್ಟ್‌,
ಏಕಕಾಲಕ್ಕೆ ಹೊರ ಹೋಗುವ ಮತ್ತು ಒಳಬರುವ 2,400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ಇದಲ್ಲದೇ ಏಕಕಾಲಕ್ಕೆ 9 ವಿಮಾನಗಳ ನಿಲುಗಡೆ, ರಾತ್ರಿ ವೇಳೆಯೂ ವಿಮಾನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗುತ್ತಿದೆ. ಟರ್ಮಿನಲ್‌ ಎದುರಿಗೆ 500 ಕಾರು, 200 ಬೈಕ್‌ ಸೇರಿದಂತೆ ಇತರೆ ವಾಹನಗಳ ಪಾರ್ಕಿಂಗ್‌ಗೆ ಅವಕಾಶವಿರಲಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು 340 ಕೋಟಿ ರೂ. ವೆಚ್ಚದಲ್ಲಿ ದೇಶದಲ್ಲೇ ಮೊದಲ ಐದು ಸ್ಟಾರ್‌ ಶ್ರೇಯಾಂಕ ಹೊಂದಿದ ಕಟ್ಟಡವನ್ನು ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಿಸಲಾಗುತ್ತಿದೆ. ಒಂದೇ ಬಾರಿಗೆ 10 ವಿಮಾನಗಳು ನಿಲುಗಡೆ ಹಾಗೂ ನಾಲ್ಕು ಏರೋ ಬ್ರಿಜ್‌ಗಳು ಇರಲಿವೆ. ಈಗಿರುವ ಟರ್ಮಿನಲ್‌ ವಿಸ್ತೀರ್ಣಗಿಂತ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ಇದರಿಂದ ಪ್ರತಿದಿನ 2400 ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ದೇಶದ 15 ವಿಮಾನ ನಿಲ್ದಾಣಗಳ ಯೋಜನೆಗ ಳಿಗೆ ಪ್ರಧಾನಿಯಿಂದ ಶಿಲಾನ್ಯಾಸ, ಉದ್ಘಾಟನೆ ವಿಮಾನ ನಿಲ್ದಾಣಗಳು, ಕಟ್ಟಡಗಳ ನಿರ್ಮಾಣ ಸೇರಿದಂತೆ 42,000 ಕೋಟಿ ರೂ.ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಈ ಪೈಕಿ ಉತ್ತರ ಪ್ರದೇಶದ 34,700 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳೂ ಸೇರಿವೆ. 9,800 ಕೋಟಿ ರೂ. ಮೌಲ್ಯದ 15 ವಿಮಾನ ನಿಲ್ದಾಣ ಯೋಜನೆಗಳಿಗೂ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿದ್ದು, ಈ ಪೈಕಿ ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿಯ ಹೊಸ ಟರ್ಮಿನಲ್‌ಗ‌ಳ ಶಿಲಾನ್ಯಾಸವೂ ಸೇರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next