Advertisement

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

03:19 PM Apr 29, 2024 | Team Udayavani |

ಹುಬ್ಬಳ್ಳಿ: ಬಿಜೆಪಿ ನಾಯಕರು 400 ಸೀಟುಗಳನ್ನು ಕೇಳುತ್ತಿರುವುದು ದೇಶದ ಉದ್ದಾರಕ್ಕಾಗಿ ಅಲ್ಲ. ದೇಶದ ಸಂವಿಧಾನವನ್ನು ಬದಲು ಮಾಡಲು ಇಷ್ಟೊಂದು ಸೀಟುಗಳನ್ನು ಕೇಳುತ್ತಿದ್ದಾರೆ. ಇವರಿಗೆ ಪ್ರಜಾಪ್ರಭುತ್ವ, ಸಂವಿಧಾನ ಬೇಕಾಗಿಲ್ಲ ಎಂದು ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ.ರೇವಣ್ಣ ತಿಳಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಆಚಾರ, ವಿಚಾರ ಏನು ಇಲ್ಲ ಬರೀ ಪ್ರಚಾರ ಮಾತ್ರ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಿಲ್ಲ. ಮಾಂಗಲ್ಯ ಕಿತ್ತುಕೊಳ್ಳುತ್ತಾರೆ, ಮುಸ್ಲಿಂ ತುಷ್ಟಿಕರಣದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಾಯಿ ತೆಗೆದರೆ ಬರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ದೇಶದಲ್ಲಿ ಶ್ರೀಮಂತರನ್ನು ಶ್ರೀಮಂತರನ್ನಾಗಿ ಮಾಡುವುದು ಬಿಜೆಪಿಯ ಮೊದಲ ಗುರಿ. ಹೀಗಾಗಿ ಇವರು 400 ಸ್ಥಾನಗಳನ್ನು ಕೇಳುತ್ತಿದ್ದು, ಸಂವಿಧಾನ ಬದಲು ಮಾಡುವುದು ಇವರ ಮೊದಲ ಆದ್ಯತೆ ಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಹಾಸನದ ಸಂಸದ ಅದೆಷ್ಟೋ ಮಹಿಳೆಯರ ಮಾಂಗಲ್ಯ ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಮೋದಿ ಮಾತನಾಡುವುದಿಲ್ಲ. ಬಿಜೆಪಿ ನಾಯಕರೂ ಮಾತನಾಡುತ್ತಿಲ್ಲ. ಉತ್ತರ ಪ್ರದೇಶ, ಗುಜರಾತ್ ಅಂತ ರಾಜ್ಯಗಳಲ್ಲಿ ಮಹಿಳೆಯರ ನಾಪತ್ತೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಮೋದಿಯವರು ಯಾಕೆ ಮಾತನಾಡುತ್ತಿಲ್ಲ. ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಬ್ರಿಜ್ ಭೂಷಣ ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯದ ಬಗ್ಗೆ ಮಾತನಾಡಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಅವರು ವ್ಯಂಗ್ಯವಾಡಿದ್ದರು. ಇದೀಗ ನಮ್ಮ ಯೋಜನೆಗಳನ್ನು ಹೈಜಾಕ್ ಮಾಡಿ ಘೋಷಣೆ ಮಾಡಿದ್ದಾರೆ. ಇವರು ವಿಶ್ವಗುರು ಆಗಿದ್ದರೆ ಯಾಕೆ ಒಂದೇ ಒಂದು ಮಾಧ್ಯಮಗೋಷ್ಠಿ ನಡೆಸಲಿಲ್ಲ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಲು ಹೆದರಿಕೆಯುಳ್ಳ ಮೋದಿಯಿಂದ ದೇಶದ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next