Advertisement

ಹುಬ್ಬಳ್ಳಿ : ಖಾಸಗಿ ಬಸ್‌ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿಗೆ ಗಾಯ

10:42 AM Jul 03, 2018 | Team Udayavani |

 ಹುಬ್ಬಳ್ಳಿ: ನಗರದ ಅಗಡಿ ಕ್ರಾಸ್‌ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. 

Advertisement

ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ರಸ್ತೆಯ ಪಕ್ಕವೇ ಉರುಳಿ ಬಿದ್ದಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

ಗಾಯಾಳುಗಳನ್ನು ಕಿಮ್ಸ್‌ ಮತ್ತು ನಗರದ ಇನ್ನೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿರುವ ಬಗ್ಗೆ ವರದಿಯಾಗಿದೆ. 

ಹುಬ್ಬಳ್ಳಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ. 

Advertisement

Udayavani is now on Telegram. Click here to join our channel and stay updated with the latest news.

Next