Advertisement
ಹುಬ್ಬಳ್ಳಿ ಗಲಭೆ ಆರೋಪಿಗಳ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯಲು ನಿರ್ಧರಿಸಿರುವ ರಾಜ್ಯ ಸರಕಾರದ ನಿರ್ಧಾರ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ| ಸಿ.ಎನ್. ಅಶ್ವತ್ಥನಾರಾಯಣ, ಶಾಸಕ ಎಸ್.ಆರ್. ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿ.ಟಿ. ರವಿ ಮತ್ತು ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.
Related Articles
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
Advertisement
ಕರ್ನಾಟಕದಲ್ಲಿ ಈಗ ಬಿಗ್ ಬಾಸ್ ಧಾರಾವಾಹಿ ನಡೆಯುತ್ತಿದೆ. ಕಾಂಗ್ರೆಸ್ ಸರಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್. ಅವರ ಸೂಚನೆಯಂತೆ ಸರಕಾರ ನಡೆದುಕೊಳ್ಳುತ್ತಿದೆ. ಮತ ಬ್ಯಾಂಕ್ ಹಾಗೂ ಹಗರಣಗಳನ್ನು ಮರೆಮಾಚಲು ಕಾಂಗ್ರೆಸ್ ಸರಕಾರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದೆ.– ಆರ್. ಅಶೋಕ್,ವಿಧಾನಸಭೆ ವಿಪಕ್ಷ ನಾಯಕ ಬಿಜೆಪಿಯವರು ಆಡಳಿತದಲ್ಲಿ ಇದ್ದಾಗಲೂ ಇಂತಹ ಸಾಕಷ್ಟು ಪ್ರಕರಣಗಳನ್ನು ಹಿಂಪಡೆದಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಇದನ್ನು ಮಾಡಿದ್ದಾರೆ. ಹುಬ್ಬಳ್ಳಿ ಪ್ರಕರಣ ಮಾತ್ರ ವಾಪಸ್ ಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಬಹುತೇಕ ಎಲ್ಲ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.
– ಡಾ| ಪರಮೇಶ್ವರ, ಗೃಹ ಸಚಿವ