ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಕಂಡು ಬಂದರೆ ಆಯೋಗವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ|ಬಿ. ಬಸವರಾಜು ಹೇಳಿದರು.
Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ಸಾಮಾನ್ಯ ವೀಕ್ಷಕರು ಮತ್ತು ಚುನಾವಣಾ ವಿವಿಧ ನೋಡಲ್ ಅಧಿಕಾರಿಗಳ ಸಭೆಕೈಗೊಂಡು ಅವರು ಮಾತನಾಡಿದರು.
ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಚುನಾವಣೆಯನ್ನು ಮುಕ್ತ- ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಜರುಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಚುನಾವಣಾ ಕಾರ್ಯದಲ್ಲಿ ತೊಡಗುವ ಎಲ್ಲ ಹಂತದ ಅಧಿಕಾರಿಗಳಿಗೆ ಉತ್ತಮ ತರಬೇತಿ ನೀಡಬೇಕು. ನೇಮಕವಾಗುವ ಅಧಿಕಾರಿಗಳು ತಮಗೆ ನೀಡಿರುವ ಜವಾಬ್ದಾರಿಗಳ ಕುರಿತು ಕೈಪಿಡಿಗಳನ್ನು ಓದಿ ತಿಳಿದುಕೊಳ್ಳಬೇಕು. ಯಾವುದೇ ಪ್ರಭಾವ-ಒತ್ತಡಗಳಿಗೆ ಒಳಗಾಗದೇ ನಿರ್ಭಯವಾಗಿ ಚುನಾವಣಾ ನಿಯಮಗಳನ್ನು ಪಾಲಿಸಬೇಕು ಎಂದರು. ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ, ಪರಿಶೀಲನೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳಿಂದ ಚುನಾವಣಾ ಪ್ರಚಾರ ಆರಂಭವಾಗಿದೆ. ಈ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಹೆಚ್ಚು ಮುಂಜಾಗ್ರತೆ ವಹಿಸಿ ಚುನಾವಣಾ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಮದ್ಯಸಂಗ್ರಹ, ಮದ್ಯಸರಬರಾಜು ಮತ್ತು ಮದ್ಯಬಳಕೆ ಕುರಿತು ಪ್ರತಿದಿನ ಮಾಹಿತಿ ಪಡೆದು ಪರಿಶೀಲಿಸಬೇಕು. ಅಕ್ರಮಗಳ ಬಗ್ಗೆ ಸುಳಿವು ಸಿಕ್ಕರೆ ತಕ್ಷಣ ದಾಳಿ ಮಾಡಿ ವಶಪಡಿಸಿಕೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂದರು.
Related Articles
Advertisement
ಪ್ರಸಕ್ತ ಚುನಾವಣೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗವು ಸೂಚಿಸಿ, ಕೋವಿಡ್ ಕುರಿತ ಎಸ್‌ಒಪಿಯನ್ನು ನೀಡಿದೆ. ಈ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿ ಸೇರಿ ಕೇವಲ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಭ್ಯರ್ಥಿಯಪ್ರಚಾರಕ್ಕಾಗಿ ಯಾವುದೇ ರೀತಿಯ ಗುಂಪು ಸೇರುವುದು, ಮೆರವಣಿಗೆ, ವಾಹನ ಬಳಕೆ,ರ್ಯಾಲಿ, ಸಾರ್ವಜನಿಕ ಸಭೆ ಮುಂತಾದವುಗಳ
ಆಯೋಜನೆಯನ್ನು ನಿರ್ಬಂಧಿಸಲಾಗಿದೆ. ವಿದ್ಯುನ್ಮಾನ, ಸಾಮಾಜಿಕ ಜಾಲತಾಣ ಹಾಗೂ ಮದ್ರಣ ಮಾಧ್ಯಮ ಸೇರಿದಂತೆ ಕರಪತ್ರ, ಪೋಸ್ಟರ್ ಇತ್ಯಾದಿ ಮಾದ್ಯಮ ಮತ್ತು ಪ್ರಚಾರ ಸಾಮಗ್ರಿಗಳ ಬಳಕೆಗೆ ಅನುಮತಿ ನೀಡಲಾಗಿದೆ. ಅಭ್ಯರ್ಥಿಗೆ 3,00,000 ರೂ.ಗಳವರೆಗೆ ವೆಚ್ಚ ಮಾಡಲು
ಅನುಮತಿಸಲಾಗಿದ್ದು, ಪ್ರತಿ ದಿನ ವೆಚ್ಚದ ವಿವರಗಳನ್ನು ಅಭ್ಯರ್ಥಿಗಳು ಸಂಬಂಧಿಸಿದ ಚುನಾವಣಾ ಅಧಿ ಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದರು.ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ನಿತೇಶ ಪಾಟೀಲ ಮಾತನಾಡಿ,ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 403497 ಪುರುಷ, 407954 ಮಹಿಳಾ ಮತ್ತು ಇತರೆ 86 ಸೇರಿದಂತೆ ಒಟ್ಟು 8,11,537 ಮತದಾರರು ಮತದಾನ ಮಾಡಲಿದ್ದಾರೆ. 82 ವಾರ್ಡ್ ವ್ಯಾಪ್ತಿಯಲ್ಲಿ 5 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 4,210 ಜನ ವಿವಿಧ ಹಂತದ ಅಧಿಕಾರಿ, ಸಿಬ್ಬಂದಿಗಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು. ಮಹಾನಗರ ಪಾಲಿಕೆಯ ಚುನಾವಣೆಗಾಗಿ 18 ಜನ ಚುನಾವಣಾ ಅಧಿಕಾರಿಗಳನ್ನು ಮತ್ತು 18 ಜನ ಸಹಾಯಕ ಚುನಾವಣಾಧಿಕಾರಿಗಳನ್ನು
ನೇಮಿಸಲಾಗಿದೆ. ಪ್ರತಿ 10 ವಾರ್ಡ್‌ಗೆ ಒಬ್ಬರಂತೆ ಅ ಧಿಕಾರಿಯನ್ನು ನೇಮಿಸಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಕುರಿತು ನಿಗಾ ವಹಿಸಿ ಪರಿಶೀಲಿಸಲಾಗುತ್ತಿದೆ. 63 ಜನ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಮಹಾನಗರ ಪಾಲಿಕೆಯ 82 ವಾರ್ಡ್‌ಗಳಿಗೆ ಸ್ಪರ್ಧೆ ಬಯಸಿ 569
ನಾಮಪತ್ರಗಳ ಸಲ್ಲಿಕೆಯಾಗಿದ್ದು, ಈ ಪೈಕಿ 486 ಜನ ಕ್ರಮಬದ್ಧ ನಾಮನಿರ್ದೇಶಿತ ಅಭ್ಯರ್ಥಿಗಳು ಉಳಿದಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯನ್ನು ಯಶಸ್ವಿಗೊಳಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಪೊಬೇಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಎಸಿ ಡಾ|ಗೋಪಾಲಕೃಷ್ಣ ಬಿ., ಸಾಮಾನ್ಯ ವೀಕ್ಷಕ ಷಣ್ಮುಖಪ್ಪ ಡಿ., ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನಾಯಕ ಪಾಲನಕರ, ಭೂ ದಾಖಲೆಗಳ ಉಪ ನಿರ್ದೇಶಕ ವಿಜಯಕುಮಾರ .ಎ.ಪಿ., ಎನ್‌ಐಸಿ ಅಧಿಕಾರಿ ಮೀನಾಕುಮಾರಿ ಎಂ., ವೆಚ್ಚ ನಿರ್ವಹಣಾ ನೋಡಲ್ ಅಧಿಕಾರಿ ವರದರಾಜ್, ಅಬಕಾರಿ ಇಲಾಖೆ ಅಧಿಕಾರಿ ಆತ್ಮಲಿಂಗ ಮಠಪತಿ ಇದ್ದರು. ಮತಗಟ್ಟೆ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆ ಅಧಿಕಾರಿಗಳಾಗಿ ನೇಮಕಗೊಂಡ ಸಿಬ್ಬಂದಿ ಗಳಿಗೆ ಅಂಚೆ ಮೂಲಕ ಮತದಾನ ಮಾಡಲು ರಾಜ್ಯ ಚುನಾವಣಾ ಆಯೋಗವು ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾದ ಡಿಸಿ ನಿತೇಶ ಪಾಟೀಲ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ಕರ್ತವ್ಯಕ್ಕೆ ನೇಮಿಸಲ್ಪಟ್ಟ ಅಧಿಕಾರಿ ಅಥವಾ ಸಿಬ್ಬಂದಿಗಳು ಅಂಚೆ ಮತಪತ್ರ ಕೋರಿ, ಪ್ರಪತ್ರ 15 ರಲ್ಲಿ ಅವಶ್ಯಕ ಮಾಹಿತಿಯನ್ನು ಭರ್ತಿಮಾಡಿ ಚುನಾವಣಾ ಗುರುತಿನ ಚೀಟಿ ಮತ್ತು ನೇಮಕಾತಿ ಆದೇಶದಛಾಯಾಪ್ರತಿಯನ್ನು ಲಗತ್ತಿಸಿ ಆ.29 ರೊಳಗಾಗಿ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿರುವ ಮಹಾನಗರ ಪಾಲಿಕೆಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆಕ್ಟರ್ ಅಧಿಕಾರಿಗಳಿಗೆ ಪಾಲಿಕೆ ಚುನಾವಣಾ ತರಬೇತಿ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ 2021ರಲ್ಲಿ ಕಾರ್ಯ ನಿರ್ವಹಿಸಲಿರುವ ಸೆಕ್ಟರ್ ಅಧಿಕಾರಿಗಳಿಗೆ
ಉತ್ತಮ ಸಂವಹನ ಕೌಶಲ್ಯ ಮುಖ್ಯವಾಗಿದ್ದು, ತಮ್ಮ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸ ಬೇಕೆಂದು ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕರ್ ಹೇಳಿದರು. ನಗರದಲ್ಲಿ ಜಿಲ್ಲಾ ಚುನಾವಣಾ ವಿಭಾಗದಿಂದ ಡಿಸಿ ಕಚೇರಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚುನಾವಣಾ ಕಾರ್ಯ ಒಂದು ಸಾಮೂಹಿಕ ಕಾರ್ಯವಾಗಿದೆ. ಗುಂಪಿನ ಎಲ್ಲ ಸದಸ್ಯರೂ ಒಳ್ಳೆಯ ಭಾಂಧವ್ಯ ಹಾಗು ಉತ್ತಮ ಹೊಂದಾಣಿಕೆ ಯೊಂದಿಗೆ ಕಾರ್ಯ ನಿರ್ವಹಿಸಿದರೆ ಮಾತ್ರ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮತ್ತು ಮಾಸ್ಟರ್ ಟ್ರೇನರ್ ಎಸ್.ಎನ್. ರುದ್ರೇಶ ಮಾತನಾಡಿ, ಸೆಕ್ಟರ್ ಅ ಧಿಕಾರಿಗಳ ತರಬೇತಿ ಬಹುಮುಖ್ಯವಾಗಿರುವುದರಿಂದ ಸೆಕ್ಟರ್ ಅಧಿಕಾರಿಗಳು ಪ್ರತಿಯೊಂದನ್ನು ಗಮನವಿಟ್ಟು ತಿಳಿದುಕೊಳ್ಳಬೇಕು. ಗೊಂದಲ, ಸಂಶಯಗಳಿದ್ದಲ್ಲಿ ಸ್ಥಳದಲ್ಲಿಯೇ ಕೇಳಿ ಪರಿಹರಿಸಿಕೊಳ್ಳಬೇಕು ಎಂದರು. ಚುನಾವಣಾ ತಹಶೀಲ್ದಾರ್ ಹೆಚ್. ಎನ್.ಬಡಿಗೇರ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಎಲ್ಲ ಸೆಕ್ಟರ್ ಅಧಿಕಾರಿಗಳು, ಚುನಾವಣಾ ಶಾಖೆಯ ಸಿಬ್ಬಂದಿ ಇದ್ದರು.