ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಮಾರ್ಪಾಟಾಗಲು ಹಸಿರು ನಿಶಾನೆ ದೊರೆತಿದೆ. ಮಾ.10ರಂದು ಹೊಸ ಟರ್ಮಿನಲ್ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿಯವರು ವರ್ಚುವಲ್ ಮೂಲಕ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
Advertisement
ಸಚಿವ ಜೋಶಿಯವರ ಆಶಯದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೇಶದಲ್ಲಿ ಒಟ್ಟು 9811 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ 14 ಇತರೆ ವಿಮಾನ ನಿಲ್ದಾಣ ಯೋಜನೆಗಳ ಉದ್ಘಾಟನೆ/ ಶಂಕುಸ್ಥಾಪನೆ ಕಾರ್ಯವನ್ನು ಅಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ವಚ್ಯುìವಲ್ ಮೂಲಕ ನೆರವೇರಿಸಲಿದ್ದಾರೆ.
ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಸಚಿವ ಜೋಶಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೇರಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ
ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಸತತ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಿದ್ದರ
ಫಲವಾಗಿ ಇಂದು ವಿಶ್ವಮಟ್ಟದಲ್ಲಿ ಹುಬ್ಬಳ್ಳಿ ಗುರುತಿಸುವಂತಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು ನಿಲ್ದಾಣದ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ವಿಮಾನ ನಿಲ್ದಾಣ ಪ್ರಾಧಿಕಾರವು ಸಚಿವ ಜೋಶಿ ಅವರನ್ನು ಆಹ್ವಾನಿಸಿದೆ.
Related Articles
Advertisement
ಹು-ಧಾ ವಿಮಾನ ಸೇವೆ ವಿಸ್ತರಣೆಗೆ ಬುನಾದಿ ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತೀ ದೊಡ್ಡ ನಗರವಾಗಿದೆ. ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (ಐಐಐಟಿ) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾರ್ಯಾರಂಭ ಮಾಡಿವೆ. ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ದೇಶದ ಹಲವು ನಗರಗಳಿಗೆ ಹುಬ್ಬಳ್ಳಿಯಿಂದ ವಿಮಾನ ಸೇವೆ ಆರಂಭಿಸಲು ಸಹ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.