Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಗೌರವಾಧ್ಯಕ್ಷ ಪ್ರಕಾಶ ಬೆಂಡಿಗೇರಿ, ಈಶ್ವರ ದೇವಸ್ಥಾನ ಸದ್ಗುರು ಸಿದ್ಧಾರೂಢ ಸ್ವಾಮಿಗಳ ಅಮೃತ ಹಸ್ತದಿಂದ ಸ್ಥಾಪಿಸಲ್ಪಟ್ಟು ಈಗ 100 ವರ್ಷ ಪೂರ್ಣಗೊಂಡಿದ್ದರಿಂದ ಶತಮಾನೋತ್ಸವ ಸಂಭ್ರಮದಲ್ಲಿದ್ದೇವೆ. ಆ ನಿಮಿತ್ತ ಜನಜಾಗೃತಿ ಧರ್ಮ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.’
Related Articles
Advertisement
19ರಂದು ಸಂಜೆ 4:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸುಳ್ಳ ಪಂಚಗ್ರಹ ಹಿರೇಮಠ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪಾಲ್ಗೊಳ್ಳಲಿದ್ದಾರೆ. 20ರಂದು ಮಹಾಶಿವರಾತ್ರಿ ಅಮವಾಸ್ಯೆ ಬೆಳಗ್ಗೆ 7 ಗಂಟೆಗೆ ದೇವರಿಗೆ ರುದ್ರಾಭಿಷೇಕ ನಡೆಯಲಿದೆ. ಅಮ್ಮಿನಬಾವಿ ಶ್ರಿ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಚಿವ ಶಂಕರಪಾಟೀಲ ಮುನೇನಕೊಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.
21ರಂದು ಸಂಜೆ 4:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸೂಡಿ ಶ್ರೀ ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಪ್ರವಚನ ನೀಡಲಿದ್ದಾರೆ. ಕೆಎಲ್‌ಇ ಸಂಸ್ಥೆ ಶಂಕರಣ್ಣ ಮುನವಳ್ಳಿ ಪಾಲ್ಗೊಳ್ಳಲಿದ್ದಾರೆ. 22ರಂದು ಸಾಯಂಕಾಲ 4:30 ಗಂಟೆಗೆ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ, ಗುರುನಾಥಾರೂಢ ಸ್ವಾಮಿಗಳ ಹಾಗೂ ಈಶ್ವರ ದೇವರ ರಥೋತ್ಸವ ನಡೆಯಲಿದೆ. ಸಂಜೆ 7 ಗಂಟೆಗೆ ಶತಮಾನೋತ್ಸವ ಸಮಾರಂಭದ ಸಮಾರೋಪ ನಡೆಯಲಿದ್ದು, ಮೂರುಸಾವಿರಮಠದ ಜಗದ್ಗುರು ಡಾ| ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.ಮಹೇಶ ಮುರಗೋಡ, ಮಲ್ಲಿಕಾರ್ಜುನ ಶಿರಗುಪ್ಪಿ, ಬಾಲಕೃಷ್ಣ ಸೂರ್ಯವಂಶಿ, ಗಣೇಶ ಇದ್ದರು.