Advertisement

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

02:50 PM May 18, 2024 | Team Udayavani |

ಹುಬ್ಬಳ್ಳಿ: ನೇಹಾ ಮತ್ತು ಅಂಜಲಿ ಹತ್ಯೆಯು ಕರ್ನಾಟಕವೇ ಬೆಚ್ಚಿ ಬೀಳಿಸುವಂತಹ ಹಾಗೂ ಸಮಾಜದ ನಾಗರಿಕರು ತಲೆ ತಗ್ಗಿಸುವಂತಾಗಿದೆ ಎಂದು ಕೂಡಲಸಂಗಮದ ಜಗದ್ಗುರು ಶ್ರೀ ಜಯಮೃಂತ್ಯುಜಯ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಮೃತ ಅಂಜಲಿ ನಿವಾಸಕ್ಕೆ ಶನಿವಾರ ಭೇಟಿ ಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ನೇಹಾ ಕೊಲೆ ಬಳಿಕ ಸರ್ಕಾರ ಎಚ್ಚೆತ್ತು ಕೊಳ್ಳಬೇಕಿತ್ತು. ಸರ್ಕಾರ ಗಂಭೀರವಾಗಿ ಆಡಳಿತ ನಡೆಸುತ್ತಿಲ್ಲ. ರಾಜ್ಯವು ಸುರಕ್ಷಿತ ಸ್ಥಳವಾಗಿತ್ತು. ಆದರೆ ಹುಬ್ಬಳ್ಳಿ ಮತ್ತೊಂದು ಬಿಹಾರ ಎಂಬ ಅಪಕೀರ್ತಿ ಪಡೆಯುತ್ತಿರುವುದು ದುರಾದೃಷ್ಟಕರ. ರಾಜ್ಯದ ಜನ ಭಯ ಭೀತರಾಗಿದ್ದಾರೆ. ಇದರಲ್ಲಿ ಪೊಲೀಸ್ ಇಲಾಖೆ ವಿಫಲತೆ ಕಾಣುತ್ತಿದೆ ಎಂದರು.

ಸರ್ಕಾರ ಆರೋಪಿಗೆ ಶಿಕ್ಷೆ ನೀಡಬೇಕು. ತ್ವರಿತ ನ್ಯಾಯಾಲಯ ಸ್ಥಾಪಿಸಿ ಕಠಿಣ ಶಿಕ್ಷೆ ನೀಡಬೇಕು. ಯುವತಿಯರು, ಮಹಿಳೆಯರು ನಿರ್ಭಯವಾಗಿ ಇರುವಂತಾಗಬೇಕು. ಸರ್ಕಾರ ಮೃತಳ ಕುಟುಂಬಕ್ಕೆ ಪರಿಹಾರ ಹಾಗೂ ಶಿಕ್ಷಣ ನೀಡಬೇಕು. ಸಮಾಜ ಒಗ್ಗಟ್ಟಾಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next