ಹುಬ್ಬಳ್ಳಿ: ನಗರದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ಆಗಮಿಸಲಿರುವ ಪ್ರಧಾನಿ ಮೋದಿಯವರ ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗೋಕುಲ ರಸ್ತೆಯ ವಿಮಾನ ನಿಲ್ದಾಣ ಎದುರಿಗೆ ವಿದ್ಯಾರ್ಥಿಗಳು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತರು ರಂಗೋಲಿ ಹಾಕುವ ಮೂಲಕ ರಸ್ತೆಗಳನ್ನು ಶೃಂಗಾರ ಗೊಳಿಸಿದರು. ವೆಲ್ ಕಮ್ ಟೂ ಹುಬ್ಬಳ್ಳಿ ಮೋದಿ ಎಂಬ ಬೃಹತ್ ಅಕ್ಷರದಲ್ಲಿ ಬರೆಯಲಾಗಿದೆ. ಇನ್ನೂ ಭಿನ್ನ ರೀತಿ ಬೃಹತ್ ಆಕಾರದ ರಂಗೋಲಿ ಬಿಡಿಸಲಾಗಿದೆ.
ಬಿಗಿ ಭದ್ರತೆ: ಸೂಕ್ತ ಭದ್ರತೆ ಒದಗಿಸುವ ಉದ್ದೇಶದಿಂದ ಪೊಲೀಸರು ಸಕಲ ಸಿದ್ಧತೆ ನಡೆಸಿದ್ದಾರೆ. ಸಂಚಾರ ಪೊಲೀಸರು ವಾಹನ ಸಂಚಾರ ನಿಯಂತ್ರಿಸುತ್ತಿದ್ದಾರೆ. ಗೋಕುಲ ರಸ್ತೆಯ ಮಾರ್ಗದುದ್ದಕ್ಕೂ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇನ್ನು ಒಳ ರಸ್ತೆಗಳಿಂದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬ್ಯಾರಿಕೇಡ್ ಅಳವಡಿಸಲಾಗಿದೆ.