Advertisement

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

02:34 PM Apr 29, 2024 | Team Udayavani |

ಹುಬ್ಬಳ್ಳಿ: ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಸ್ಥಾನವನ್ನು ಪ್ರಹ್ಲಾದ್ ಜೋಶಿ ತುಂಬಲಿದ್ದಾರೆ ಎನ್ನುವ ನಿರೀಕ್ಷೆಯಿತ್ತು. ಇವರಿಂದ ರಾಜ್ಯಕ್ಕೆ ಮತ್ತು ಕ್ಷೇತ್ರಕ್ಕೆ ಯಾವುದೇ ಅನುಕೂಲವಾಗಿಲ್ಲ. ರಾಜಕಾರಣಕ್ಕಾಗಿ ರಾಜ್ಯವನ್ನು ಬಳಕೆ ಮಾಡಿಕೊಂಡಿರುವುದು ಇವರ ಬಹುದೊಡ್ಡ ಸಾಧನೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಲೇವಡಿ ಮಾಡಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಅವರು ರಾಜ್ಯದ ವಿಚಾರ ಬಂದಾಗ ಕೇಂದ್ರದಲ್ಲಿ ರಾಜ್ಯದ ಪರವಾಗಿ ಒಂದಿಷ್ಟು ಕೆಲಸ ಮಾಡುತ್ತಿದ್ದರು. ಅವರ ನಂತರ ಪ್ರಹ್ಲಾದ ಜೋಷಿ ಅವರು ಸ್ಥಾನವನ್ನು ತುಂಬಲಿದ್ದಾರೆ ಎನ್ನುವ ನಿರೀಕ್ಷೆ ರಾಜ್ಯದ ಜನತೆಯಲ್ಲಿತ್ತು. ಆದರೆ ತಮ್ಮ ರಾಜಕಾರಣಕ್ಕಾಗಿ ರಾಜ್ಯವನ್ನು ಬಳಕೆ ಮಾಡಿಕೊಂಡಿರುವುದು ಇವರ ಬಹುದೊಡ್ಡ ಸಾಧನೆ ಎಂದರು. ಕಾಂಗ್ರೆಸ್ ಪಕ್ಷದಿಂದ ಸಜ್ಜನ ಹಾಗೂ ವಿದ್ಯಾವಂತ ಅಭ್ಯರ್ಥಿ ವಿನೋದ ಅಸೂಟಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದರು.

ಸಿಬಿಐ ಈಡಿ ಐಟಿ ಇವುಗಳ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವುದು ಮೋದಿಯ ಕೆಲಸ. ಇಂಡಿಯಾ ಒಕ್ಕೂಟದಲ್ಲಿದ್ದ ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿಸಿದ್ದಾರೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಣ ಪ್ರಮಾಣ ಕುಸಿದಿದೆ. 2013 ರಲ್ಲಿ ಶೇ.4.9 ರಷ್ಟಿದ್ದ ನಿರುದ್ಯೋಗ ಪ್ರಮಾಣ ಈಗ ಶೇ.8 ಕ್ಕೆ ತಲುಪಿದೆ. ಹಿಂದಿನ ಎಲ್ಲಾ ಪ್ರಧಾನಿಗಳು ಮಾಡಿದ ಸಾಲದ ಅರ್ಧದಷ್ಟು ಸಾಲವನ್ನು ನರೇಂದ್ರ ಮೋದಿ ಮಾಡಿದ್ದಾರೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next