Advertisement

Hubli; ಆಕಾಶ್ ಕೊಲೆಯ ಸತ್ಯಾಸತ್ಯತೆ ಪೊಲೀಸರು ಹೊರತರಲಿ: ಮಹೇಶ ಟೆಂಗಿನಕಾಯಿ

01:23 PM Jun 23, 2024 | Team Udayavani |

ಹುಬ್ಬಳ್ಳಿ: ಆಟೋ ರಿಕ್ಷಾ ಸಂಘದ ಅಧ್ಯಕ್ಷನ ಮಗನ ಕೊಲೆ ನಿನ್ನೆ ನಡೆದಿದೆ. ಆದರೆ ಪೊಲೀಸರು ಕೊಲೆಯ ಬಗ್ಗೆ ಇನ್ನೂ ಸ್ಪಷ್ಟತೆ ಪಡಿಸಿಲ್ಲ. ಆದರೆ ಶೇಖರಯ್ಯ ಮಠಪತಿ ತನ್ನ ಮಗನ ಕೊಲೆಯಾಗಿದೆ ಎಂದು ದೂರು ನೀಡಿದ್ದಾರೆ. ಈ ಕುರಿತ ಸತ್ಯಾಸತ್ಯೆಯನ್ನು ಪೊಲೀಸರು ಹೊರತರಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

Advertisement

ಕಿಮ್ಸ್ ಶವಾಗಾರಕ್ಕೆ ಭೇಟಿಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಪೊಲೀಸರ ಜೊತೆಗೆ ಮಾತನಾಡಿದಾಗ ತಲೆ ಭಾಗಕ್ಕೆ ಗಾಯವಾಗಿದೆ ಎಂದು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಜಾಂಶ ಹೊರಬರಲಿದೆ. ಕೊಲೆ ಆಗಿದ್ದರೆ ಪೊಲೀಸ್ ಇಲಾಖೆ ಸಂಪೂರ್ಣ ತನಿಖೆ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಅವರೆಲ್ಲರನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು ಎಂದರು.

ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ಮರುಕಳಿಸುತ್ತಿವೆ. ಕಾನೂನು ಸುವ್ಯವಸ್ಥೆ ತಹಬದಿಗೆ ತರುವ ಕಾರ್ಯ ಪೊಲೀಸರು ಮಾಡಬೇಕು. ಅವಳಿ ನಗರದಲ್ಲಿ ಮಾದಕವಸ್ತು ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟಬೇಕೆಂದು ನಾವು ಎರಡು ತಿಂಗಳ ಹಿಂದೆಯೇ ಅಭಿಯಾನ ಆರಂಭಿಸಿದ್ದೇವೆ ಎಂದರು.

ಪ್ರತಿಭಟನೆ: ಆಕಾಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಿಮ್ಸ್‌ನ ಶವಾಗಾರ ಮುಂಭಾಗ ಆಟೋರಿಕ್ಷಾ ಚಾಲಕರ ಸಂಘದವರು ಪ್ರತಿಭಟನೆ ನಡೆಸಲು ಮುಂದಾದರು. ಆಕಾಶನ ಸಾವಿಗೆ ನ್ಯಾಯ ಕೊಡಿಸುವಂತೆ ಶವಾಗಾರದ ಮುಂದೆ ಜಮಾಯಿಸಿದ ನೂರಾರು ಆಟೋ ಚಾಲಕರು ಘೋಷಣೆ ಕೂಗಿದರು.

ಈ ವೇಳೆ ಪ್ರತಿಭಟನೆ ಕೈಬಿಡುವಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದರು. ಆಗ ನ್ಯಾಯ ದೊರಕಿಸಿಕೊಡಿ ಎಂದು ಆಟೋರಿಕ್ಷಾ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಹನಮಂತಪ್ಪ ಪವಾಡಿ ಪೊಲೀಸ್ ಇನ್ಸಪೆಕ್ಟರ್ ಕಾಲಿಗೆ ಬಿದ್ದು ಅಂಗಲಾಚಿದರು.

Advertisement

ಘಟನೆ ನಡೆದಿರುವ ಸುದ್ದಿ ತಿಳಿದ ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ನಮ್ಮ ಮೇಲೆ ಭರವಸೆ ಇಡಿ. ಅವನು ನಮ್ಮ ಮಗನಿದ್ದಂತೆ. ಸಾವಿಗೆ ಸೂಕ್ತ ನ್ಯಾಯ ಕೊಡಿಸುವುದಾಗಿ ಎಸಿಪಿಗಳಾದ ವಿನೋದ ಮುಕ್ತೆದಾರ ಮತ್ತು ಶಿವಪ್ರಕಾಶ ನಾಯ್ಕ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next