Advertisement

Hubli; ಔಷಧಿ ಸಸ್ಯಗಳ ಉತ್ಪಾದನೆಯ ಸದ್ಭಳಕೆಯಾಗಲಿ: ಡಾ. ಶ್ರೀನಿವಾಸಲು

02:05 PM Jun 08, 2024 | Team Udayavani |

ಹುಬ್ಬಳ್ಳಿ: ಕಪ್ಪತಗುಡ್ಡ ಎಂಬುದು ಔಷಧೀಯ ಸಸ್ಯಗಳ ಮುಖ್ಯ ಕೇಂದ್ರವಾಗಿದೆ. ಇಲ್ಲಿ 400 ಔಷಧೀಯ ಸಸ್ಯಗಳಿವೆ. ಪ್ರತಿವರ್ಷ ಔಷಧಿ ಸಸ್ಯಗಳ ಉತ್ಪಾದನೆ ಮತ್ತು ಬಳಕೆಯಲ್ಲಿ 25 ಸಾವಿರ ಕೋಟಿ ರೂ.ಗಳ ವಹಿವಾಟು ನಡೆಯುತ್ತಿದೆ. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಆಯುಷ್ ಇಲಾಖೆಯ ಆಯುಕ್ತ ಡಾ. ಶ್ರೀನಿವಾಸಲು ಹೇಳಿದರು.

Advertisement

ಇಲ್ಲಿನ ವಿದ್ಯಾನಗರ ಬಿವಿಬಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಆವರಣದ ಬಯೋಟೆಕ್ನಾಲಜಿ ಸಭಾಗೃಹದಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ಆಯೋಜಿಸಿರುವ ಔಷಧೀಯ ಸಸ್ಯಗಳ ಜೀವ ವೈವಿಧ್ಯತೆ, ಸಂರಕ್ಷಣೆ ಮತ್ತು ಕೃಷಿ ಹಾಗೂ ಆರೋಗ್ಯ ರಕ್ಷಣೆ ಕಾರ್ಯಾಗಾರದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಪ್ಪತಗುಡ್ಡ ನಂದಿವೇರಿ ಶಿವಕುಮಾರ ಸ್ವಾಮೀಜಿ, ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ವೆಂಕಟೇಶನ್, ಬೆಂಗಳೂರಿನ ಟ್ರಾನ್ಸ್-ಡಿಸಿಪ್ಲಿನರಿ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಜಗನ್ನಾಥರಾವ್ ಆರ್., ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next