Advertisement

Hubli; 2ಎ ಮೀಸಲಾತಿ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಹೋರಾಟ ಆರಂಭ

12:09 PM Oct 13, 2023 | Team Udayavani |

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಹಮ್ಮಿಕೊಂಡಿರುವ ಇಷ್ಟಲಿಂಗ ಪೂಜೆಯ ಹೋರಾಟಕ್ಕೆ ಚಾಲನೆ ನೀಡಲಾಯಿತು.

Advertisement

ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು  ಇಲ್ಲಿನ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಇಲ್ಲಿಂದ ಬಂಕಾಪುರ ಚೌಕ್ ವರೆಗೆ ಬೈಕ್ ರ್ಯಾಲಿ, ನಂತರ ಗಬ್ಬೂರು ವೃತ್ತದವರೆಗೂ ಪಾದಯಾತ್ರೆ ಮೂಲಕ ತೆರಳಿ ಅಲ್ಲಿ ಇಷ್ಟಲಿಂಗ ಪೂಜೆ ಮೂಲಕ ಮೀಸಲಾತಿಗೆ ಹಕ್ಕೊತ್ತಾಯ ಮಾಡಲಿದ್ದಾರೆ.

ನಂತರ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಆಯಾ ಜಿಲ್ಲಾ ಮಟ್ಟದಲ್ಲಿ ಇಷ್ಟಲಿಂಗ ಪೂಜೆ ಮೂಲಕ ಹಕ್ಕೊತ್ತಾಯ ಮಾಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಈ ಹೋರಾಟ ನಡೆಯಲಿದೆ. ಸಮಾಜದ ಬೇಡಿಕೆ ಈಡೇರುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಮೀಸಲಾತಿ ಪಡೆದೆ ತೀರುತ್ತೇವೆ ಎಂದು ಸಮಾಜ ನಿರ್ಧರಿಸಿದೆ. ಹಿಂದಿನ ಸರಕಾರ ಜಾರಿಗೆ ತಂದಿರುವ ಮೀಸಲಾತಿ ಅನುಷ್ಠಾನ ಆಗಿಲ್ಲ. ಈ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ಮುಗಿಯುವುದರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next