Advertisement

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

06:48 PM Sep 16, 2024 | Team Udayavani |

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಇದನ್ನು ಖಂಡಿಸಿ ಸೆ.22 ರಂದು ಸಮಾಜದ ವಕೀಲರ ಪರಿಷತ್ತಿನಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಗಾಂಧಿ ಭವನದಲ್ಲಿ ಬೃಹತ್ ಸಮಾವೇಶ ನಡೆಸಿ ನಂತರ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು. ಇದರೊಂದಿಗೆ ಲಿಂಗಾಯತ ಉಪಸಮಾಜಗಳಿಗೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸರಕಾರದ ನಿರ್ಲಕ್ಷ್ಯ, ಸಮಾಜದ ಶಾಸಕರು ಧ್ವನಿ ಎತ್ತದಿರುವುದು ಏಳನೇ ಹಂತದ ಹೋರಾಟವಾಗಿ ಸಮಾಜದ ವಕೀಲರ ಮೂಲಕ ಹೋರಾಟಕ್ಕೆ ಮುಂದಾಗಿದ್ದೇವೆ. ಶೀಘ್ರದಲ್ಲಿಯೇ ಮೀಸಲಾತಿ ಹೋರಾಟಕ್ಕೆ ವಿದ್ಯಾರ್ಥಿಗಳು ಕೂಡ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ನವಲಗುಂದಲ್ಲಿ ಸೆ.17 ರಂದು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next