Advertisement

Hubli; ಸ್ಟೈಪಂಡ್ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ

02:52 PM Aug 12, 2024 | Team Udayavani |

ಹುಬ್ಬಳ್ಳಿ: ಸ್ಟೈಪಂಡ್ ಹೆಚ್ಚಳ ಮಾಡಬೇಕು, ನಮಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಪ್ರವೇಶ ಶುಲ್ಕ ಕಡಿತಗೊಳಿಸಬೇಕೆಂದು ಆಗ್ರಹಿಸಿ ಕಿರಿಯ ವೈದ್ಯರು ಕಿಮ್ಸ್‌ ನಲ್ಲಿ ತಮ್ಮ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿವರೆಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ವೈದ್ಯರು ತುರ್ತು ಸೇವೆ ಹೊರತುಪಡಿಸಿ ಹೊರ ರೋಗಿಗಳ ವಿಭಾಗ (ಒಪಿಡಿ) ಸೇರಿದಂತೆ ಇನ್ನಿತರೆ ಸೇವೆ ಸಂಪೂರ್ಣ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದಾಗಿ ಚಿಕಿತ್ಸೆಗೆಂದು ಬಂದಿರುವ ರೋಗಿಗಳು ಪರದಾಡುತ್ತಿದ್ದಾರೆ. ಹಿರಿಯ ವೈದ್ಯರು ಒಪಿಡಿ ಸೇರಿದಂತೆ ಇನ್ನಿತರೆಡೆ ಸೇವೆ ಸಲ್ಲಿಸುತ್ತಿದ್ದಾರೆ. ಕಿಮ್ಸ್‌ನ ನಿರ್ದೇಶಕರು ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಮೂಲಕ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಕಿರಿಯ ವೈದ್ಯರ ಸಂಘದವರು ತಮ್ಮ ಬೇಡಿಕೆಗಳಿಗೆ ಆಗ್ರಹಿಸಿ ಇಂದಿನಿಂದ ತುರ್ತುಸೇವೆ ವಿಭಾಗ ಹೊರತುಪಡಿಸಿ ಇನ್ನುಳಿದ ವಿಭಾಗಗಳಲ್ಲಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಎಲ್ಲಾ ವಿಭಾಗಗಳ ಎಚ್‌ಒಡಿಗಳ ತುರ್ತು ಸಭೆ ನಡೆಸಿ, ಯಾವುದೇ ರೋಗಿಗಳಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಕಿಮ್ಸ್‌ನ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next