Advertisement

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

01:12 PM Apr 20, 2024 | Team Udayavani |

ಹುಬ್ಬಳ್ಳಿ: ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಗಂಭೀರವಾಗಿ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ಮೊದಲ ದಿನ ನನ್ನ ಜೊತೆಗೆ ಇದ್ದವರು ಇಂದು ನನ್ನ ಬೆನ್ನಿಗೆ ನಿಂತಿಲ್ಲ. ಘಟನೆ ವೈಯಕ್ತಿಕ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ. ಪರಮೇಶ್ವರರು ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದಲ್ಲಿದ್ದವರೇ ಪೋಲಿಸ್ ಆಯುಕ್ತರಾದ ರೇಣುಕಾ ಸುಕುಮಾರ ಮೂಲಕ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ ಎಂದರು.

ನೇಹಾ ಹತ್ಯೆಯಲ್ಲಿ ಫಯಾಜ್ ಒಬ್ಬನೇ ಇಲ್ಲ, ಈತನ ಹಿಂದೆ ನಾಲ್ಕು ಜನರಿದ್ದಾರೆ. ಒಬ್ಬನಿಂದಲೇ ಈ ಕೃತ್ಯ ನಡೆದಿರಲು ಸಾಧ್ಯವಿಲ್ಲ. ಅವರ ಹೆಸರನ್ನು ಪೊಲೀಸರಿಗೆ ಕೊಟ್ಟಿದ್ದೇನೆ. ಅವರು ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇನ್ಸ್ಟಾಗ್ರಾಮ್ ನಲ್ಲಿ ನನ್ನ ಮಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅವಳ ಬಗ್ಗೆ ಸಮಾಜದಲ್ಲಿ ತಪ್ಪು ತಿಳಿವಳಿಕೆ ಬರುವಂತೆ ಮಾಡಿದ್ದಾರೆ. ಆರೋಪಿ ಜೈಲಿನಲ್ಲಿದ್ದರೂ ಖಾತೆ ಯಾರು ಸೃಷ್ಟಿ ಮಾಡಿದ್ದಾರೆ ಎಂದು ಪೋಲಿಸರು ತನಿಖೆ ನಡೆಸಬೇಕು. ಈ ಕುರಿತು ವಕೀಲರೊಂದಿಗೆ ಮಾತನಾಡಿದ್ದೇನೆ.‌ ಸೈಬರ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಿದ್ದೇನೆ ಎಂದರು.

ಹಿಂದೆ ಆರೋಪಿ ಫಯಾಜ್ ಆಸ್ತಿ ವಿಚಾರಕ್ಕೆ ಸಂಬಂಧಿಸಿ ತನ್ನ ತಂದೆಯನ್ನೇ ಪೊಲೀಸ್ ಠಾಣೆಯಲ್ಲಿ ಕೊಲೆ ಮಾಡಲು ಹೋಗಿದ್ದ, ಇದನ್ನು ಸಮಾಜದ ಮುಖಂಡರು ನನಗೆ ತಿಳಿಸಿದ್ದಾರೆ. ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದರೇ ನನ್ನ ಮಗಳ ರಕ್ಷಣೆ ನಾನು ಮಾಡಿಕೊಳ್ಳುತ್ತಿದ್ದೆ. ಅವಳು ಇಂದು ಬದುಕುಳಿಯುತ್ತಿದ್ದಳು ಎಂದು ಕಣ್ಣೀರು ಹಾಕಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next