ಹುಬ್ಬಳ್ಳಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಅಡ್ಡಿ ತಪ್ಪಿಸಲು ವಿವಿಧ ನಿಗಮ-ಮಂಡಳಿಗಳ ನೇಮಕ ಬಳುವಳಿ ಮೂಲಕ ತನ್ನದೇ ಪಕ್ಷದ ಟಿಕೆಟ್ ಆಕಾಂಕ್ಷಿಗಳನ್ನು ಸಂತೈಸಲು, ಬಂಡಾಯ-ಪಕ್ಷಾಂತರ ತಡೆಗೆ ಮುಂದಾಗಿರುವ ಬಿಜೆಪಿ ಉತ್ತರ ಕರ್ನಾಟಕಕ್ಕೆ ಜಾಕ್‌ಪಾಟ್ ನೀಡಿದೆ!
Advertisement
ಅನರ್ಹಗೊಂಡ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದರೆ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡಲು ಆಯಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತವರು, ಮಾಜಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ತಮ್ಮ ಸ್ಪರ್ಧೆ ಖಚಿತ ಎಂದು ಕೆಲವರು ಸ್ಪಷ್ಟಪಡಿಸಿದ್ದರು.
Related Articles
Advertisement
ಅನರ್ಹರಿಗೆ ಅನುಕೂಲ ಯತ್ನ: ಕಾಂಗ್ರೆಸ್-ಜೆಡಿಎಸ್ ನಿಂದ ಗೆದ್ದಿದ್ದ ಕೆಲ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರಾದರೂ ಸಮ್ಮಿಶ್ರ ಸರ್ಕಾರದಲ್ಲಿ ಸ್ಪೀಕರ್ ರಮೇಶ ಕುಮಾರ ರಾಜೀನಾಮೆ ಅಂಗೀಕರಿಸದೆ 17 ಶಾಸಕರನ್ನು ಅನರ್ಹಗೊಳಿಸಿದ್ದರು.
ಅನರ್ಹ ಶಾಸಕರು ಉಪ ಚುನಾವಣೆ ಎದುರಾದರೆ ಬಿಜೆಪಿಯಿಂದ ಟಿಕೆಟ್ ಪಡೆಯುವ ಖಾತ್ರಿಯೊಂದಿಗೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೇವಲ ಒಂದೂವರೆ ವರ್ಷದ ಹಿಂದೆಯಷ್ಟೇ ಯಾರ ವಿರುದ್ಧ ಸೆಣಸಾಡಿ ಸೋತಿದ್ದೆವೋ, ಇದೀಗ ಅವರನ್ನೇ ಪಕ್ಷದ ಅಭ್ಯರ್ಥಿಯಾಗಿಸಿ, ಅವರ ಪರ ಪ್ರಚಾರ ಮಾಡುವುದಾದರು ಹೇಗೆ, ಮುಂದಿನ ನಮ್ಮ ರಾಜಕೀಯ ಭವಿಷ್ಯದ ಕಥೆ ಏನು ಎಂಬುದು ಬಿಜೆಪಿಯಿಂದ ಸ್ಪರ್ಧಿಸಿ ಸೋತ ಹಾಗೂ ಮಾಜಿ ಶಾಸಕರ ಪ್ರಶ್ನೆಯಾಗಿದೆ.
ಇನ್ನು ಕೆಲವರು ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಟಿಕೆಟ್ ದೊರೆಯದಿದ್ದರೆ ಬಂಡಾಯ, ಅನ್ಯಪಕ್ಷಇಲ್ಲವೆ ಪಕ್ಷೇತರ ಸ್ಪರ್ಧೆ ಸಂದೇಶ ರವಾನಿಸಿದ್ದರು. ಇದು ಬಿಜೆಪಿ ನಾಯಕರಿಗೆ ಇರುಸು- ಮುರುಸು ತರಿಸಿತ್ತಲ್ಲದೆ, ಅನರ್ಹಗೊಂಡ ಶಾಸಕರಲ್ಲಿ ಅನೇಕರಿಗೆ ಆತಂಕ ಹೆಚ್ಚುವಂತೆ ಮಾಡಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶ್ರೀಮಂತಗೌಡ ಪಾಟೀಲ, ಬಿಜೆಪಿಯ ಭರಮಗೌಡ (ರಾಜು)ಕಾಗೆ ವಿರುದ್ಧ 32,942 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಗೋಕಾಕ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಮೇಶ ಜಾರಕಿಹೊಳಿ ಬಿಜೆಪಿಯ ಅಶೋಕ ಪೂಜಾರ ವಿರುದ್ಧ 14,280 ಮತಗಳಿಂದ ಗೆದ್ದಿದ್ದರು. ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ.ಎಸ್.ಪಾಟೀಲ ಬಿಜೆಪಿಯ ಯು.ಬಿ.ಬಣಕಾರ ವಿರುದ್ಧ ಕೇವಲ 555 ಮತಗಳಿಂದ ಪ್ರಯಾಸದ ಗೆಲುವು ಸಾಧಿಸಿದ್ದರು. ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರತಾಪಗೌಡ ಪಾಟೀಲ ಬಿಜೆಪಿಯ ಬಸನಗೌಡ ತುರವಿಹಾಳ ವಿರುದ್ಧ 213 ಮತಗಳ ಅಂತರದ ಗೆಲುವು ಸಾಧಿಸಿದ್ದರು. ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಆಗಮಿಸಿ ಸ್ಪರ್ಧಿಸಿದ್ದ ಆನಂದ ಸಿಂಗ್ ಬಿಜೆಪಿಯ ಎಚ್.ಆರ್. ಗವಿಯಪ್ಪ ವಿರುದ್ಧ 8,228 ಮತಗಳಿಂದ ಗೆಲುವು ಸಾಧಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಿವರಾಮ ಹೆಬ್ಟಾರ ಬಿಜೆಪಿಯ ವಿ.ಎಸ್.ಪಾಟೀಲ ವಿರುದ್ಧ ಕೇವಲ 1,483 ಮತಗಳಿಂದ ಗೆಲುವು ಸಾಧಿಸಿದ್ದರು.