ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದ ಪಿ.ಟಿ. ಕ್ವಾಟರ್ಸ್‌ನ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 12 ಜನರನ್ನು ಬಂಧಿಸಿ, 1ಕೆಜಿ 365ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ವಿವಿಧ ಬಡವಾಣೆಯ ಅಭಿಷೇಕ ಹನಮಂತ, ಮಹಮ್ಮದ್ ಆಯಾಜ್ ಜೈನುಲಾಬುದ್ದೀನ, ಇಸ್ಮಾಯಿಲ್ ಮೆಹಬೂಬ ಅಲಿ, ಜಾಫರ ಊರುಫ್ ಬಾಂಬೆಜಾಫರ ಮಕ್ಬೂಲ್, ಜುಬೇರ ಅಹ್ಮದ ದಾದಾಪೀರ, ಪುರಕಾನ್ ನಿಸಾರಹ್ಮದ, ಶಾನವಾಜ ಗೌಸಮೋದಿನ, ಸೋಹಿಲ ನಜೀರಹ್ಮದ, ಮಹ್ಮದಸಾಧೀಕ ರೀಯಾಜ, ರೋಶನ ಸೋಯಬ ಊರುಫ್ ಬಬ್ಲೂ ಜಮೀಲಾಅಹ್ಮದ್, ಸಲೀಂ ಹಜರತಸಾಬ, ಕರೀಂ ಜಾಂಗೀರಖಾನ ಬಂಧಿತರು.
ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಠಾಣೆ ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರ ಅವರ ತಂಡವು ದಾಳಿ ನಡೆಸಿದ್ದು, ಒಂದು ಲಕ್ಷ ರೂ. ಮೌಲ್ಯದ ಗಾಂಜಾ, 9 ಮೊಬೈಲ್ ಫೋನ್ಸ್, ಮೂರು ಬೈಕ್, ಎರಡು ಸಾವಿರ ನಗದು ಸೇರಿ ಒಟ್ಟು 4.52 ಲಕ್ಷ ರೂ. ಮೌಲ್ಯದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ.
ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಸುದ್ದಿಗಾರರಿಗೆ ತಿಳಿಸಿದರು.
ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್. ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಇದ್ದರು.