Advertisement
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೇಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.
Related Articles
Advertisement
ಬಿಜೆಪಿಗೆ ಯಾವ ನೈತಿಕತೆ ಇದೆ ಅನ್ನುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಾರ ಮೇಲೆ ಆರೋಪವಿದೆ, ಇಲ್ಲಾ ಅನ್ನುವ ಪ್ರಶ್ನೆಯಲ್ಲ. ಈಗ ಸಿಎಂ ಸಿದ್ದರಾಮಯ್ಯ ಅವರ ಪ್ರಶ್ನೆ ಬಂದಿದೆ. ಹಿಂದೆ ಅವರು ವಿಪಕ್ಷದಲ್ಲಿದ್ದಾಗ ಎಲ್ಲರ ನೈತಿಕತೆ ಪ್ರಶ್ನೆ ಮಾಡುತ್ತಿದ್ದರು. ಈಗ ಅವರು ಮುಖ್ಯಮಂತ್ರಿ ಆಗಿದ್ದಾರೆ. ಅವರೇ ನೈತಿಕತೆ ಪ್ರಶ್ನೆ ಮಾಡಿಕೊಳ್ಳಬೇಕು. ಅದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಶೀಘ್ರವೇ ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ: ಅಭ್ಯರ್ಥಿ ಆಯ್ಕೆ ಬಗ್ಗೆ ಈಗಾಗಲೇ ಎರಡು ಸಭೆಗಳನ್ನು ಮಾಡಲಾಗಿದೆ. ಹಲವು ಆಕಾಂಕ್ಷಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿಗ್ಗಾವಿ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಹಾಗೂ ಮುರುಗೇಶ ನಿರಾಣಿ ಸೇರಿ ಹಲವರಿಂದ ಟಿಕೆಟ್ ಲಾಬಿ ಕುರಿತು ಪ್ರತಿಕ್ರಿಯಿಸಿದ ಅವರು, ಕಳೆದ ಹತ್ತು ದಿನಗಳಿಂದ ನಾನು ಊರಲ್ಲಿ ಇರಲಿಲ್ಲ. ಹೀಗಾಗಿ ಏನು ಬೆಳವಣಿಗೆ ಆಗಿದೆಯೋ ಗೊತ್ತಿಲ್ಲ. ಆದಷ್ಟು ಬೇಗ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದರು.