Advertisement

Hubli: ಮಹಿಳೆ ಸ್ನಾನ ಮಾಡುತ್ತಿದ್ದ ವಿಡಿಯೋ ಚಿತ್ರೀಕರಿಸಿದವನಿಗೆ ಕಂಬಕ್ಕೆ ಕಟ್ಟಿ ಥಳಿತ

06:58 PM Jan 09, 2024 | Team Udayavani |

ಹುಬ್ಬಳ್ಳಿ: ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ವಿಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಮಂಗಳವಾರ ಇಲ್ಲಿಯ ಗೋಕುಲ ರಸ್ತೆಯ ಡಾ. ಆರ್.ಎಂ. ಲೋಹಿಯಾ ನಗರದಲ್ಲಿ ನಡೆದಿದೆ.

Advertisement

ಗಣೇಶ ಪೇಟೆ ನಿವಾಸಿ ಲಾಡಸಾಬ್ ಎಂಬಾತ ಹೇಯ ಕೃತ್ಯ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಈತ ಲೋಹಿಯಾ ನಗರದಲ್ಲಿ ಕಟ್ಟಡವೊಂದರ ಬಾರ್‌ ಬೆಂಡಿಂಗ್ ಕೆಲಸ ಮಾಡುವ ವೇಳೆ ಈ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಕ್ಕದ ಮನೆಯ ಬಾತ್‌ ರೂಮ್ ಕಿಟಕಿಯಲ್ಲಿ ಮೊಬೈಲ್ ಫೋನ್ ಇಟ್ಟು ಮಹಿಳೆ ಸ್ನಾನ ಮಾಡುವ ವಿಡಿಯೋ ಚಿತ್ರೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಮಹಿಳೆಯ ಚೀರಾಟದ ಧ್ವನಿ ಕೇಳಿದ ಸುತ್ತಮುತ್ತಲಿನ ಜನರು ತತ್ ಕ್ಷಣ ಜಮಾಯಿಸಿ, ಲಾಡಸಾಬ್ ನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next