Advertisement

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

02:28 PM Nov 16, 2024 | Team Udayavani |

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು.

ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. ಈ ದೃಶ್ಯಾವಳಿಯು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡಿತ್ತು. ಬಾಲಕಿಯ ಪೋಷಕರು ಯುವಕರ ವಿರುದ್ಧ ಶುಕ್ರವಾರ (ನ.15) ಹಳೇಹುಬ್ಬಳ್ಳಿ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.

ಠಾಣೆಯ ಇನ್ಸ್‌ಪೆಕ್ಟರ್ ಸುರೇಶ ಹಳ್ಳೂರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಯುವಕರನ್ನು ಬಂಧಿಸಲಾಗಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ರುದ್ರಪ್ಪ ಗುಡದರಿ, ಎಎಸ್ಐ ಪಿ.ಬಿ. ಕಾಳೆ ಮತ್ತು ಸಿಬ್ಬಂದಿ ಫಕ್ಕಿರೇಶ ಗೊಬ್ಬರಗುಂಪಿ, ಅಭಯ ಕಟ್ನಳ್ಳಿ, ನಾಗರಾಜ ಕೆಂಚಣ್ಣನವರ, ಕೃಷ್ಣ ಮೋಟೆಬೆನ್ನೂರ, ಸಂತೋಷ ವಲ್ಯಾಪುರ, ರಮೇಶ ಹಲ್ಲೆ, ಕಲ್ಲನಗೌಡ ಗುರನಗೌಡ, ವಿಠಲ ಹೊಸಳ್ಳಿ, ಜಗದೀಶ ಗೌಂಡಿ ಪಾಲ್ಗೊಂಡಿದ್ದರು.

Advertisement

ಪ್ರಮುಖ ಆರೋಪಿ ಶುಭಂ ತಡಸ ವಿರುದ್ಧ ಕಸಬಾಪೇಟೆ ಮತ್ತು ಹಳೇಹುಬ್ಬಳ್ಳಿ ಠಾಣೆಯಲ್ಲಿ ಎರಡು ಹಾಗೂ ಸಾಗರ ಸಾತಪುತೆ ವಿರುದ್ಧ ಹಳೇಹುಬ್ಬಳ್ಳಿ ಠಾಣೆಯಲ್ಲಿ ಎರಡು, ಸಚಿನ ನರೇಂದ್ರ ವಿರುದ್ಧ ಒಂದು ಪ್ರಕರಣ ದಾಖಲಾಗಿದ್ದು, ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಹು-ಧಾ. ಪೊಲೀಸ್ ಆಯುಕ್ತ ಎನ್.‌ ಶಶಿಕುಮಾರ್ ಶನಿವಾರ ಸುದ್ದಿಗಾರರಿಗೆ ಮಾಹಿತಿ ಕೊಟ್ಟರು

Advertisement

Udayavani is now on Telegram. Click here to join our channel and stay updated with the latest news.

Next