Advertisement

Hubli; ಯತೀಂದ್ರ ಅವರ ಭಾಷೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಪ್ರಹ್ಲಾದ್ ಜೋಶಿ

03:09 PM Mar 30, 2024 | Team Udayavani |

ಹುಬ್ಬಳ್ಳಿ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಭಾಷೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಂಡಾ ಎಂದು ಕರೆದಿರುವುದು ಅಕ್ಷಮ್ಯ ಅಪರಾಧ. ಕೂಡಲೇ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಮಾತನಾಡಿರುವ ಪ್ರಕರಣಗಳನ್ನು ಈಗಾಗಲೇ ನ್ಯಾಯಾಲಯ ಖುಲಾಸೆ ಮಾಡಿದೆ. ನ್ಯಾಯಾಲಯದ ಮೇಲೆ ಅವರಿಗೆ ವಿಶ್ವಾಸವಿಲ್ಲವೇ? ಈ ಹೇಳಿಕೆಗಳು ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿದಂತೆ. ಅವರ ತಂದೆ (ಸಿದ್ದರಾಮಯ್ಯ) ಕೇಂದ್ರ ಸರಕಾರದ ವಿರುದ್ಧ ದೂರು ನೀಡುವ ಕೆಲಸ ಮಾಡುತ್ತಿದ್ದರೆ ಮಗ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಚುನಾವಣೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಗೊಂದಲಗಳಿರುವುದು ಸಹಜ. ಚಿತ್ರದುರ್ಗ ಟಿಕೆಟ್‌ ಹಂಚಿಕೆಯಲ್ಲಾಗಿರುವ ಗೊಂದಲವನ್ನು ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ. ಮಂಡ್ಯ ಟಿಕೆಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅವರನ್ನು ಮನವೊಲಿಸುವ ಕೆಲಸ ನಡೆದಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next