Advertisement
ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ಆಶ್ರಯದಲ್ಲಿ ಥಿಂಕ್ ಫೌಂಡೇಶನ್ ಹಾಗೂ ಎಂಜಿಎಂ ಹಾಸ್ವಿಟಲ್ ಕಾಮೋಟೆ ಇವರ ಸಹಯೋಗದಲ್ಲಿ ಅ. 10ರಂದು ನೆರೂಲ್ ಶ್ರೀ ಶನೀಶ್ವರ ಮಂದಿರದ ಆವರಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಂಟ್ಸ್ ಹೆಲ್ತ್ ಕೇರ್ ಆಶ್ರಯದಲ್ಲಿ ಇದು ನಾಲ್ಕನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಈಗಾಗಲೇ ಜರಗಿದ ಎಲ್ಲ ಶಿಬಿರಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿವೆ. ಈ ಶಿಬಿರದ ಹಿಂದೆ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಬಹಳಷ್ಟು ಶ್ರಮ ವಹಿಸುತ್ತಿ¨ªಾರೆ. ಅವರ ಬಳಗ ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ತಿಳಿಸಿ ಅಭಿನಂದಿಸಿದರು.
Related Articles
Advertisement
ರಕ್ತದಾನ ಶಿಬಿರದ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಥಿಂಕ್ ಫೌಂಡೇಶನ್‌ನ ವಿನಯ್ ಶೆಟ್ಟಿ ಮಾತನಾಡಿ, ಡಾ| ಸತ್ಯಪ್ರಕಾಶ್ ಶೆಟ್ಟಿ ನೇತೃತ್ವದಲ್ಲಿ ಬಂಟರ ಸಂಘ ಮುಂಬಯಿ ಇದರ ಆಶ್ರಯದಲ್ಲಿ ರಕ್ತದಾನ ಶಿಬಿರದ ಆಯೋಜನೆಯಂತಹ ಒಳ್ಳೆಯ ಕಾರ್ಯ ನಡೆಯುತ್ತಿದೆ. ಅವರ ಈ ಯೋಜನೆಗೆ ಎಲ್ಲ ಬಂಟ ಸಮುದಾಯದವರಿಂದ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಅಭಿನಂದ ನಾರ್ಹ ಎಂದು ತಿಳಿಸಿ, ಕಾರ್ಯಕ್ರಮ ವನ್ನು ಆಯೋಜಿಸಿದ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಎಲ್ಲ ಪದಾಧಿಕಾರಿ ಗಳಿಗೆ ಕೃತಜ್ಞತೆ ಸಲ್ಲಿಸಿದರು.
ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಮುಂದಾಳತ್ವ ವಹಿಸಿದ್ದರು.
ಸಮಾರಂಭದಲ್ಲಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಡಿ. ಶೆಟ್ಟಿ, ಭಾಸ್ಕರ್ ಶೆಟ್ಟಿ ತಾಳಿಪಾಡಿಗುತ್ತು, ಪ್ರಾದೇಶಿಕ ಸಮಿತಿಯ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಬಾಲೇಶ್ ಅರಿಗ, ಜತೆ ಕಾರ್ಯದರ್ಶಿ ನಾಗೇಶ್ ಶೆಟ್ಟಿ ಬೈಕಾಡಿ ಹೆದ್ದಾರಿ ಮನೆ, ಜತೆ ಕೋಶಾಧಿಕಾರಿ ಭಾಸ್ಕರ್ ಶೆಟ್ಟಿ ಪದ್ಮ, ಸಲಹೆಗಾರರಾದ ದಯಾನಂದ ಶೆಟ್ಟಿ ಶಿಮಂತೂರುಭಾವ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಮಹಿಳಾ ವಿಭಾಗದ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ರೂಪಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಗುಣವತಿ ವೈ. ಶೆಟ್ಟಿ, ವೀಣಾ ಎ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ನವಿಮುಂಬಯಿ ಪ್ರಾದೇಶಿಕ ಸಮಿತಿಯ ವತಿಯಿಂದ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿ ಅವರು ರಕ್ತದಾನಗೈದು ಶಿಬಿರಕ್ಕೆ ಚಾಲನೆ ನೀಡಿದರು. ಸಮನ್ವಯಕರಾದ ಜಗದೀಶ್ ಶೆಟ್ಟಿ ನಂದಿಕೂರು, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಖಾಂದೇಶ್ ಭಾಸ್ಕರ್ ಶೆಟ್ಟಿ, ಉಪಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ದಕ್ಷಿಣ್, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅದ್ಯಪಾಡಿ, ಕೋಶಾಧಿಕಾರಿ ರವೀಶ್ ಜಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷರಾದ ಸಂತೋಷ್ ಡಿ. ಶೆಟ್ಟಿ, ಸಂಜೀವ ಎನ್. ಶೆಟ್ಟಿ, ಸಲಹೆಗಾರರಾದ ಧರ್ಮದರ್ಶಿ ಆಣ್ಣಿ ಸಿ. ಶೆಟ್ಟಿ, ರವಿ ಆರ್. ಶೆಟ್ಟಿ, ದಯಾನಂದ ಶೆಟ್ಟಿ ಶಿಮಂತೂರುಭಾವ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಬಂಟ್ಸ್ ಹೆಲ್ತ… ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಬಾಲೇಶ್ ಅರಿಗ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರೇಣುಕಾ ಭಂಡಾರಿ, ಸಲಹೆಗಾರರಾದ ಸರಿತಾ ಕೆ. ಶೆಟ್ಟಿ, ಅನಿತಾ ಎಸ್. ಶೆಟ್ಟಿ, ಸ್ಮಿತಾ ಎಚ್. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಒಟ್ಟು 175 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಅವರು ಬಂಟರ ಸಂಘದ ಎಲ್ಲ ಪದಾಧಿಕಾರಿಗಳನ್ನು ಪರಿಚಯಿಸಿ, ಸ್ವಾಗತಿಸಿ, ಗೌರವಿಸಿದರು. ಪ್ರಾದೇಶಿಕ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ರಕ್ತ ಮನುಷ್ಯನ ಪಾಲಿಗೆ ಅದೆಷ್ಟು ಮುಖ್ಯವಾಗಿದೆ ಎನ್ನುವುದನ್ನು ಎಲ್ಲರೂ ಕೊರೊನಾ ಮಹಾಮಾರಿಯ ಸಮಯದಲ್ಲಿ ಅರ್ಥೈಸಿಕೊಂಡಿದ್ದಾರೆ. ಒಂದು ಯುನಿಟ್ ರಕ್ತ ಓರ್ವ ವ್ಯಕ್ತಿಯ ಪ್ರಾಣವನ್ನು ಉಳಿಸಬಲ್ಲದು. ಅಂತಹ ಒಂದು ಉತ್ತಮ ಕೆಲಸವನ್ನು ಇಂದು ಬಂಟರ ಸಂಘದ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿಯವರು ಮಾಡುತ್ತಿದ್ದಾರೆ. ನಿಜವಾಗಿಯೂ ಇದು ದೇವರು ಮೆಚ್ಚುವ ಕೆಲಸ. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿಯವರ ಪರಿಶ್ರಮವನ್ನು ಮೆಚ್ಚಲೇಬೇಕು. ಬಹಳಷ್ಟು ಶ್ರದ್ಧೆಯಿಂದ ಶ್ರಮಿಸುತ್ತಿದ್ದಾರೆ ಎನ್ನುವುದಕ್ಕೆ ಈ ಶಿಬಿರದ ಆಯೋಜನೆಯೇ ನಿದರ್ಶನವಾಗಿದೆ. ಈ ಸಮಿತಿಯಯವರಿಂದ ಹರೀಶ್ ಶೆಟ್ಟಿ ಪಡುಬಿದ್ರೆಯವರ ಮುಂದಾಳತ್ವದಲ್ಲಿ ಇನ್ನಷ್ಟು ಈ ರೀತಿಯ ಸಮಾಜಪರ ಸೇವಾ ಕಾರ್ಯ ನಡೆಯುತ್ತಿರಲಿ.-ಡಾ| ಆರ್. ಕೆ. ಶೆಟ್ಟಿ , ಗೌರವ ಪ್ರಧಾನ ಕಾರ್ಯದರ್ಶಿ, ಬಂಟರ ಸಂಘ ಮುಂಬಯಿ