Advertisement
ಡಿ. 5ರಂದು ಬೆಳಗ್ಗೆ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಕಲ್ಯಾಣ್ ಪಶ್ಚಿಮದ ಗೀತಾ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಬಂಟರ ಸಂಘದ ಎಂಟು ಪ್ರಾದೇಶಿಕ ಸಮಿತಿಗಳ ಸಹಕಾರದಿಂದ ಇವರೆಗೆ 1,800 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಈ ಅಭೂತಪೂರ್ವ ಕಾರ್ಯಕ್ಕೆ ತಮ್ಮೆಲ್ಲರ ಅವಿರತ ಪರಿಶ್ರಮವೇ ಕಾರಣವಾಗಿದೆ. ಇಂತಹ ಶಿಬಿರಗಳ ಮುಖಾಂತರ ರಕ್ತ ಸಂಗ್ರಹಿಸಿ ಇನ್ನೊಬ್ಬರಿಗೆ ಜೀವದಾನ ಮಾಡುವ ಪುಣ್ಯದ ಕಾರ್ಯ ಮಾಡೋಣ ಎಂದು ಹೇಳಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
Related Articles
Advertisement
ರೋಹಿಣಿ ಶೆಟ್ಟಿ, ಸುಜಾತಾ ಸುಕುಮಾರ್ ಶೆಟ್ಟಿ ಅವರ ಪ್ರಾರ್ಥನೆ ಯೊಂದಿಗೆ ಗಣ್ಯರು ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದರು. ಜಗದೀಶ್ ಬೆಳ್ಳಂಜೆ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಶೆಟ್ಟಿ ವಂದಿಸಿದರು. ಬಂಟರ ಸಂಘ ಮುಂಬಯಿ ಇದರ ಜತೆ ಕಾರ್ಯದರ್ಶಿ, ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಬಂಟರ ಸಂಘ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ, ರವೀಂದ್ರ ಶೆಟ್ಟಿ, ಸುಭೋದ್ ಭಂಡಾರಿ, ಭಾಸ್ಕರ ಶೆಟ್ಟಿ ದೊಂಡೆರಂಗಡಿ, ಸುಧೀರ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ವಿನಯ್ ಶೆಟ್ಟಿ, ಹರೀಶ್ ಶೆಟ್ಟಿ, ದಯಾನಂದ ಶೆಟ್ಟಿ, ಪ್ರವೀಣಾ ಪಿ. ಶೆಟ್ಟಿ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅನ್ನದಾನ ಹಾಗೂ ವಿದ್ಯಾದಾನ ಹಣವಂತರಷ್ಟೇ ಮಾಡಬಹುದು. ಆದರೆ ರಕ್ತದಾನವನ್ನು ಜನಸಾಮಾನ್ಯರೂ ಮಾಡಬಹುದು. ಇಂದು ಈ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಿದ್ದ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯ ಅಭಿನಂದನೀಯ. ಬಂಟರ ಸಂಘದ ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದ ಹರಿಕಾರ ಎಂದರೆ ತಪ್ಪಾಗಲಾರದು. ಕೊರೊನಾ ಕಾಲಘಟ್ಟದಲ್ಲಿಯೂ ಸುಮಾರು 1,800 ಯುನಿಟ್ ರಕ್ತ ಸಂಗ್ರಹಿಸುವ ಜತೆಗೆ ಸೋಂಕಿನಿಂದ ಸಂಕಷ್ಟಕ್ಕೊಳಗಾದ 700 ಕ್ಕೂ ಅಧಿಕ ಮಂದಿಯ ಉಪಚಾರಗೈದು ವೈದ್ಯೋ ನಾರಾಯಣೋ ಹರಿ ಎಂಬುದನ್ನು ಸಾಭೀತುಪಡಿಸಿದ್ದಾರೆ ಪ್ರತಿಯೊಬ್ಬರೂ ರಕ್ತದಾನದ ಈ ಮಹಾಯಜ್ಞದಲ್ಲಿ ಭಾಗವಹಿಸಿ ಜೀವದಾನದ ಮಹತ್ಕಾರ್ಯದಲ್ಲಿ ಭಾಗಿಯಾಗೋಣ.-ಇಂದ್ರಾಳಿ ದಿವಾಕರ ಶೆಟ್ಟಿ, ಜತೆ ಕಾರ್ಯದರ್ಶಿ, ಬಂಟರ ಸಂಘ ಮುಂಬಯಿ
ಮುಂಬಯಿ ಬಂಟರ ಸಂಘದ ಪ್ರತಿ ಪ್ರಾದೇಶಿಕ ಸಮಿತಿಗಳಲ್ಲೂ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜನರಿಗೆ ರಕ್ತದಾನದ ಮಹತ್ವವನ್ನು ಸಾರಿ ಹೇಳುವುದರ ಜತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರ ಕಾರ್ಯಕ್ಕೆ ನಮ್ಮೆಲ್ಲರ ಸಹಾಯ, ಸಹಕಾರ ನಿರಂತರವಾಗಿರಲಿ. ಮುಂಬರುವ ದಿನಗಳಲ್ಲಿ ಪ್ರಾದೇಶಿಕ ಸಮಿತಿಯ ವತಿಯಿಂದ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸುವ ಯೋಜನೆ ನಮ್ಮದಾಗಿದೆ. ಸಮಿತಿಯ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರ ಪ್ರೋತ್ಸಾಹ, ಸಹಕಾರ ಸದಾಯಿರಲಿ. -ಚಿತ್ರಾ ಆರ್. ಶೆಟ್ಟಿ, ಉಪಕಾರ್ಯಾಧ್ಯಕ್ಷೆ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗ
-ಚಿತ್ರ-ವರದಿ: ಗುರುರಾಜ ಪೋತನೀಸ್