ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪತಿ ಕಾಯ್ದೆ ಹಾಗೂ ಎನ್ಆರ್ ಸಿ ಖಂಡಿಸಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಹಾ ಜನಾಧೀವೇಶನ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ನಾಗರಿಕ ಹಕ್ಕುಗಳಿಗಾಗಿ ನಾಗರಿಕೆ ವೇದಿಕೆಯಢಿ ಸುಮಾರು 35 ಸಂಘಟನೆಗಳ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಗರ ಸೇರಿದಂತೆ ಜಿಲ್ಲಾದ್ಯಂತ 8 ಸಾವಿರಕ್ಕೂ ಅಧಿಕ ಜನ ಭಾಗಿಯಾದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮುಖಂಡರು. ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ಹಾಗೂ ಹಿಂಫುಳಿದ ಸಮುದಾಯವ ಯುವಕರು ಬ್ಯಾನರ್ ಹಿಡಿದು ಹೋರಾಟ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿವೃತ್ತ ಐಪಿಎಸ್ ಅಧಿಕಾರಿ ನಿಸ್ಸಾರ್ ಅಹ್ಮದ್, ರೈತ ಸಂಘದ ಮುಖಂಡ ಚಾಮರಸ ಮಾಲಿಪಾಟೀಲ್, ಹೋರಾಟಗಾರರಾದ ಆರ್. ಮಾನಸಯ್ಯ, ರಾಘವೇಂದ್ರ ಕುಷ್ಟಗಿ, ಡಾ.ರಜಾಕ್ ಉಸ್ತಾದ್ ಸೇರಿದಂತೆ ಅನೇಕ ಹೋರಾಟಗಾರರು ಪಾಲ್ಗೊಂಡಿದ್ದರು.