ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಭಾರತ್ ಬಂದ್ ಕರೆಗೆ ಸೋಮವಾರ(ಸೆಪ್ಟೆಂಬರ್ 27)ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೆಹಲಿ ಗಡಿಯಲ್ಲಿ ರೈತರು ಧರಣಿ ನಡೆಸುತ್ತಿದ್ದ ಪರಿಣಾಮ ರಾಜಧಾನಿಯಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಆಗಿದ್ದು, ಹಲವಾರು ರೈಲು ಸಂಚಾರ ರದ್ದುಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ: ದೇವೇಗೌಡ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಬೆಳಗ್ಗೆ 6ಗಂಟೆಯಿಂದ ಸಂಜೆ 4ಗಂಟೆವರೆಗೆ ಭಾರತ್ ಬಂದ್ ಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಇಂದು ಬೆಳಗ್ಗೆ ದೆಹಲಿ, ಮೀರತ್ ಎಕ್ಸ್ ಪ್ರೆಸ್ ವೇ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿರುವುದಾಗಿ ವರದಿ ತಿಳಿಸಿದೆ.
ಗುರ್ಗಾಂವ್ ಮತ್ತು ನೋಯ್ಡಾದಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಸಂಭವಿಸಿದೆ. ದೆಹಲಿಯಲ್ಲಿ ಆಟೋ, ಕಾರು ಸಂಚಾರ ಎಂದಿನಂತೆ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿದೆ. ಪಂಜಾಬ್ ಮತ್ತು ಹರ್ಯಾಣ ಸಂಪರ್ಕಿಸುವ ಶಂಭು ಗಡಿಯನ್ನು ಪ್ರತಿಭಟನಾಕಾರರು ಬಂದ್ ಮಾಡಿದ್ದು, ಇದರಿಂದ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ರೈತ ಸಂಘಟನೆಗಳ ಭಾರತ್ ಬಂದ್ ಕರೆಗೆ ಪಂಜಾಬ್ ಪ್ರದೇಶ್ ಕಾಂಗ್ರೆಸ್ ಸಮಿತಿ ಹಾಗೂ ಉತ್ತರಪ್ರದೇಶದ ಬಹುಜನ್ ಸಮಾಜವಾದಿ ಪಕ್ಷ ಬೆಂಬಲ ವ್ಯಕ್ತಪಡಿಸಿರುವುದಾಗಿ ತಿಳಿಸಿದೆ.ರೈತರ ಭಾರತ್ ಬಂದ್ ಕರೆಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ.