Advertisement

ಕೋವಿಡ್-19 ಲಾಕ್ ಡೌನ್: ರಾಜ್ಯ ಸಾರಿಗೆ ಸಂಸ್ಥಗೆ 816 ಕೋ. ರೂ ನಷ್ಟ

08:11 AM Apr 23, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ರಾಜ್ಯದಲ್ಲಿ ಲಾಕ್ ಡೌನ್ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಇದುವರೆಗೆ ಸುಮಾರು 816.23 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Advertisement

ಲಾಕ್ ಡೌನ್ ಕಾರಣದಿಂದ ರಾಜ್ಯದಲ್ಲಿ ಎಲ್ಲಾ ರೀತಿಯ ಸಾರಿಗೆ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಇದಿರಂದಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಡಿ ಬರುವ ನಾಲ್ಕು ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದೆ.

ಕೆಎಸ್ ಆರ್ ಟಿಸಿ ಗೆ 314.89 ಕೋಟಿ ರೂ., ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ 172.00 ಕೋಟಿ ರೂ., ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ 180.00 ಕೊಟಿ ರೂ., ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 149.34 ಕೋಟಿ ರೂ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಸದ್ಯ ಮೇ.3ರ ವರೆಗೆ ಲಾಕ್ ಡೌನ್ ಇದ್ದು, ಅದು ಮತ್ತೂ ಮುಂದುವರಿದಲ್ಲಿ ಸಾರಿಗೆ ಸಂಸ್ಥೆಗೆ ಮತ್ತಷ್ಟು ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next