Advertisement

ಕಾದು ನೋಡಿ…ಕಾಂಗ್ರೆಸ್ ಸೇರುವವರ ಸಂಖ್ಯೆ ದೊಡ್ಡದಿದೆ; ಪರಮೇಶ್ವರ್

03:03 PM Mar 03, 2017 | Sharanya Alva |

ಬೆಂಗಳೂರು: ನೀವೇ ಕಾದು ನೋಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸಂಖ್ಯೆ ದೊಡ್ಡದಿದೆ. ಯಾರೆಲ್ಲಾ ಸೇರುತ್ತಾರೆ ಎಂಬುದನ್ನು ನಾನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

Advertisement

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷ ತ್ಯಜಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ಬಂಗಾರಪ್ಪ ರಾಜೀನಾಮೆ ಬಗ್ಗೆ ಗೊತ್ತಿಲ್ಲ, ಅವರ ರಾಜೀನಾಮೆ ಪತ್ರ ಇನ್ನೂ ನನ್ನ ಕೈ ಸೇರಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇದು ಸಹಜ ಪ್ರಕ್ರಿಯೆ. ನಮ್ಮ ಪಕ್ಷಕ್ಕೆ ಸೇರುವವರ ಸಂಖ್ಯೆ ದೊಡ್ಡದಿದೆ. ಯಾರೆಲ್ಲಾ ಎಂಬುದನ್ನು ನೀವೇ ಕಾದು ನೋಡಿ ಎಂದು ಮಾರ್ಮಿಕವಾಗಿ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next