ನವದೆಹಲಿ: ಮದ್ಯ ಮಾರಾಟ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಶನಿವಾರ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಗಳ ಹೊರಗೆ ಬೃಹತ್ ಪ್ರತಿಭಟನೆಯನ್ನು ನಡೆಸಿದೆ.
ಅಬಕಾರಿ ನೀತಿ ಅಕ್ರಮದಲ್ಲಿ ಆಮ್ ಆದ್ಮಿ ಪಕ್ಷ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು/ಕಾರ್ಯಕರ್ತರು, ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಿ ಅರವಿಂದ ಕೇಜ್ರಿವಾಲ್ ಕೂಡಲೇ ತನ್ನ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಬೇಕೆಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನೆಗೆ ಬ್ಯಾರಿಕೇಡ್ ಹಾಕಿದ್ದು ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನೂ ದೂಡಿ ‘ಕೇಜ್ರಿವಾಲ್ ಚೋರ್ ಹೈ’ ಘೋಷಣೆ ಕೂಗಿದರು.
ದೆಹಲಿಯಲ್ಲಿ ಆಪ್ ಸರ್ಕಾರ 2021-22ನೇ ಸಾಲಿನಲ್ಲಿ ನೂತನ ಅಬಕಾರಿ ನೀತಿಯನ್ನು ರಚಿಸಿತ್ತು. ಅದರಡಿಯಲ್ಲಿ ಸುಮಾರು 849 ಖಾಸಗಿ ವ್ಯಾಪಾರಿಗಳಿಗೆ ಪರವಾನಗಿ ನೀಡಲಾಗಿತ್ತು. ಹೀಗೆ ಪರವಾನಗಿ ನೀಡುವಾಗ ದೊಡ್ಡಮಟ್ಟದ ಅವ್ಯವಹಾರ ನಡೆದಿದೆ. ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಆರೋಪಿಸಿದ್ದರು.
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 5 ವ್ಯಕ್ತಿಗಳು ಮತ್ತು 7 ಕಂಪನಿಗಳ ವಿರುದ್ಧದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯ ಗುರುವಾರ ಸ್ವೀಕರಿಸಿದೆ.
Related Articles
ಆಮ್ ಆದ್ಮಿ ಪಕ್ಷವು ದೆಹಲಿ ಮದ್ಯ ಹಗರಣದಿಂದ ಬಂದ ಹಣವನ್ನು ಗೋವಾದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿದೆ ಎಂದು ಇಡಿ ಹೇಳಿದ ನಂತರ ಪ್ರತಿಭಟನೆಗಳು ನಡೆಸಲಾಯಿತು. “ಇದುವರೆಗಿನ ಈ ಕಿಕ್‌ಬ್ಯಾಕ್‌ನ ಜಾಡುಗಳ ತನಿಖೆಯಿಂದ ಈ ಹಣವನ್ನು ಎಎಪಿಯ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಇದನ್ನೂ ಓದಿ: ಮಣಿಪುರದಲ್ಲಿ ಸನ್ನಿ ಲಿಯೋನ್ ಫ್ಯಾಷನ್ ಶೋ ಸ್ಥಳದ ಬಳಿ ಗ್ರೆನೇಡ್ ಸ್ಫೋಟ!