ಚಂಡೀಗಢ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷಿ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳು ಬುಧವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮನೆಯ ಹೊರಗೆ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಆದರೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸದ್ಯ ಭಗವಂತ್ ಮಾನ್ ಗುಜರಾತ್‌ನಲ್ಲಿದ್ದಾರೆ.
ಪ್ರತಿಭಟನೆ ವೇಳೆ ಆಪ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಮನರೇಗಾ ಅಡಿಯಲ್ಲಿ ದಿನಗೂಲಿಯನ್ನು ಕನಿಷ್ಠ 700 ರೂ.ಗೆ ಏರಿಕೆ ಮಾಡಬೇಕು, ಗ್ರಾಮ ಸಹಕಾರ ಸಂಘಗಳಲ್ಲಿ ದಲಿತರಿಗೆ ಶೇ.33ರಷ್ಟು ಮೀಸಲು ಕಲ್ಪಿಸಬೇಕು ಸೇರಿದಂತೆ ಪ್ರಮುಖ ಬೇಡಿಕೆ ಈಡೇರಿಸಬೇಕು ಎಂದು ಅವರ ಒತ್ತಾಯ.