Advertisement

ಅಧ್ಯಯನ ಪ್ರವಾಸಕ್ಕೂ ಅದ್ಧೂರಿ ಸ್ವಾಗತ; ಟೀಕೆ

11:03 PM Jun 09, 2019 | Lakshmi GovindaRaj |

ಲಿಂಗಸುಗೂರು: ಬರ ಅಧ್ಯಯನ ಪ್ರವಾಸಕ್ಕಾಗಿ ಶನಿವಾರ ತಾಲೂಕಿಗೆ ಭೇಟಿ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಇಲ್ಲಿನ ಬಿಜೆಪಿ ಮುಖಂಡರು ಅದ್ಧೂರಿ ಸ್ವಾಗತ ಕೋರಿದ್ದು ಚರ್ಚೆಗೆ ಗ್ರಾಸವಾಗಿದೆ.

Advertisement

ಕ್ಷೇತ್ರದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆಯಿಂದ ಜಾನುವಾರುಗಳನ್ನು ಕಸಾಯಿಖಾನೆಯತ್ತ ಮಾರಾಟ ಮಾಡುವ ಸ್ಥಿತಿ ತಲುಪಿದೆ. ಇದರ ವೀಕ್ಷಣೆಗೆ ಆಗಮಿಸಿದ್ದ ಯಡಿಯೂರಪ್ಪ, ಶನಿವಾರ ತಾಲೂಕಿನ ಮುದಗಲ್‌ ಹೋಬಳಿ ಛತ್ತರ ತಾಂಡಾದಲ್ಲಿ ಬರ ಪರಿಶೀಲನೆ ಮಾಡಿದ್ದರು. ಬಳಿಕ, ಅ ಧಿಕಾರಿಗಳ ಸಭೆ ನಡೆಸಿದ್ದರು.

ಯಡಿಯೂರಪ್ಪ ಅವರು ತಾಲೂಕಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಬಿಜೆಪಿ ಮುಖಂಡರು ನೂರಾರು ಸಂಖ್ಯೆಯಲ್ಲಿ ಬ್ಯಾನರ್‌ ಹಾಗೂ ಕಟೌಟ್‌ ಹಾಕುವ ಮೂಲಕ ಭರ್ಜರಿ ಸ್ವಾಗತ ನೀಡಿದ್ದರು. ಇದು ಚರ್ಚೆಗೆ ಗ್ರಾಸವಾಗಿದೆ. ಅವರ ಸ್ವಾಗತಕ್ಕೆ ಇಷ್ಟೆಲ್ಲಾ ಹಣ ಖರ್ಚು ಮಾಡುವ ಬದಲು ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಬಹುದಾಗಿತ್ತು. ಪಕ್ಷದ ವತಿಯಿಂದ ಮೇವು ಖರೀದಿಸಿ, ಅದನ್ನು ರೈತರಿಗೆ ಉಚಿತವಾಗಿ ನೀಡಬಹುದಾಗಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next