ಹಾವೇರಿ: ಜ್ಞಾನದ ಜತೆಗೆ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ ಎಂದು ಜಿಲ್ಲಾಧಿ ಕಾರಿ ಡಾ|ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
Advertisement
ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಆಚರಣೆ ಕುರಿತು ನಗರದಹುಕ್ಕೇರಿಮಠದ ಶಿವಾನುಭವ ಮಂಟಪದಲ್ಲಿ ರವಿವಾರ ಏರ್ಪಡಿಸಿದ್ದ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹುಕ್ಕೇರಿಮಠದಲ್ಲಿ ನಾನು ಕೇವಲ ಒಂದು ವರ್ಷ ಅಧ್ಯಯನ ಮಾಡಿದ್ದರೂ ಇಲ್ಲಿನ ಶಿಸ್ತು, ಪ್ರೀತಿ, ಸಹಕಾರ ಮನೋಭಾವ ಎಲ್ಲ ವಿದ್ಯಾರ್ಥಿಗಳನ್ನು ಒಂದೇ ಕುಟುಂಬದ ಸದಸ್ಯರನ್ನಾಗಿ ಮಾಡಿದ್ದವು ಎಂದು ಸ್ಮರಿಸಿದರು.
Related Articles
Advertisement
ಶ್ರೀ ಶಿವಲಿಂಗೇಶ್ವರ ವಿದ್ಯಾಪೀಠದ ಚೇರಮನ್ ಎಸ್.ಎಸ್.ಮುಷ್ಠಿ ಮಾತನಾಡಿ, ಸಂಸ್ಥೆಯಲ್ಲಿ ಸುಮಾರು 1200 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ದೊಡ್ಡ ಸಂಸ್ಥೆಯಾಗಿದೆ. ಈ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಹೋಗಿರುವ ಹಳೆಯ ವಿದ್ಯಾರ್ಥಿಗಳು ಅಗತ್ಯ ಸಹಾಯ, ಸಹಕಾರ ನೀಡುವ ಮೂಲಕ ಸುವರ್ಣ ಮಹೋತ್ಸವ ಯಶಸ್ಸಿಗೆ ಸಹಕರಿಸಬೇಕು ಎಂದರು.
ಬಿಜಕಲ್ ವಿರಕ್ತಮಠದ ಶ್ರೀ ಶಿವಲಿಂಗ ಸ್ವಾಮೀಜಿ, ಪ್ರಮುಖರಾದ ಪಿ.ಡಿ.ಶಿರೂರ, ಆರ್. ಎಸ್.ಮಾಗನೂರ, ವೀರಣ್ಣ ವಳಸಂಗದ,ಮಲ್ಲಿಕಾರ್ಜುನ ಸಾತೇನಹಳ್ಳಿ ಸೇರಿದಂತೆ ನೂರಾರು ಹಳೆಯ ವಿದ್ಯಾರ್ಥಿಗಳು ಇದ್ದರು. ನಿವೃತ್ತ ಪ್ರಾಚಾರ್ಯ ಬಿ.ಬಸವರಾಜ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಶಿಕ್ಷಕ ಸಿ.ಎಸ್.ಮರಳಿಹಳ್ಳಿ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ
ನಿರೂಪಿಸಿದರು.