Advertisement

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

12:45 PM Dec 20, 2024 | Team Udayavani |

ನವದೆಹಲಿ: ಮೂರು ವರ್ಷಗಳ ಹಿಂದೆ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರು ನಿಧನಹೊಂದಿದ್ದು, ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ ಎಂದು ರಕ್ಷಣಾ ಸ್ಥಾಯಿ ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Advertisement

2021ರ ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರು ಬಳಿಯ ಪರ್ವತ ಪ್ರದೇಶದಲ್ಲಿ Mi-17 V5 ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಅವಘಡದಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು 12 ಮಂದಿ ಸಾವನ್ನಪ್ಪಿದರು.

ಇದೀಗ ಘಟನೆ ನಡೆದು ಮೂರೂ ವರ್ಷಗಳ ಬಳಿಕ ಸಂಸತ್ತಿನ ಸ್ಥಾಯಿ ಸಮಿತಿಯು ಲೋಕಸಭೆಯಲ್ಲಿ ರಾವತ್ ಅವರ ಸಾವಿನ ಕುರಿತು ತನಿಖಾ ವರದಿಯನ್ನು ಮಂಡಿಸಿದ್ದು ಹೆಲಿಕಾಪ್ಟರ್ ಅವಘಡಕ್ಕೆ ಮಾನವ ಲೋಪವೇ ಕಾರಣ ಎಂದು ವರದಿಯಲ್ಲಿ ತಿಳಿಸಿದೆ.

ಸಂಸತ್ತಿನ ಸ್ಥಾಯಿ ಸಮಿತಿ ಸಲ್ಲಿಸಿದ ವರದಿಯಲ್ಲಿ 2017 ರಿಂದ 2022 ರ ವರೆಗೆ ಭಾರತೀಯ ವಾಯು ಸೇನೆಯಲ್ಲಿ ಒಟ್ಟು 34 ಅವಘಡಗಳು ಸಂಭವಿಸಿರುವುದಾಗಿ ಉಲ್ಲೇಖಿಸಿದೆ ಜೊತೆಗೆ 2021-2022ರ ಅವಧಿಯಲ್ಲಿ ಒಟ್ಟು ಒಂಬತ್ತು ಅಪಘಾತಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Advertisement
Advertisement

Udayavani is now on Telegram. Click here to join our channel and stay updated with the latest news.