Advertisement

ಶಾಲೆಗಳಲ್ಲಿ ಮಕ್ಕಳಿಗೆ ಸಾಮಾಜಿಕ ಅಂತರ ; ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

01:25 AM May 04, 2020 | Hari Prasad |

ಹೊಸದಿಲ್ಲಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳ ಆವರಣಗಳಲ್ಲಿ,  ತರಗತಿಗಳಲ್ಲಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗಸೂಚಿಗಳನ್ನು ರೂಪಿಸಿದೆ.

Advertisement

ನೂತನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಿಕ್ಷಣ ಸಂಸ್ಥೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

– ತರಗತಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.

– ಶಾಲಾ ಸಮವಸ್ತ್ರದ ಜತೆ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ.

– ಶಾಲೆಗಳಲ್ಲಿ ಪ್ರಾರ್ಥನೆಗೆ ಮಕ್ಕಳು ಗುಂಪಾಗಿ ಸೇರುವುದಕ್ಕೆ, ಆಟದ ಮೈದಾನಗಳಲ್ಲಿ ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ.

Advertisement

– ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.

– ಶೌಚಾಲಯಗಳು, ಉಪಾಹಾರ ಗೃಹಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಕ್ಕಳಿಗೆ ಸೂಕ್ತ ತಿಳಿವಳಿಕೆ ನೀಡುವುದು.

Advertisement

Udayavani is now on Telegram. Click here to join our channel and stay updated with the latest news.

Next