ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಚಪ್ಪ ಕೆ. ತಾಳಿಕೋಟಿ ಹೇಳಿದರು.
Advertisement
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಯುನಿಸೆಫ್ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಬಲವರ್ಧನೆ ಕುರಿತ ಕಾರ್ಯಾಗಾರ ಹಾಗೂ ಸಮಾಲೋಚನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಸಮಿತಿಗಳ ಮೂಲಕ ಪ್ರಚಾರ, ಜಾಗೃತಿ ಮೂಡಿಸಲಾಗುತ್ತಿದೆ. ಇಂತಹ ಪ್ರಕರಣಗಳು ಗಮನಕ್ಕೆ ಬಂದಾಗ ದಾಳಿ ನಡೆಸಿ, ಪ್ರಕರಣ ದಾಖಲು ಮಾಡಲಾಗುತ್ತಿದೆ. ಮದುವೆ ಆಮಂತ್ರಣ ಪತ್ರಿಕೆ ತಯಾರಿಸುವಾಗ ಮುದ್ರಣ ಮಾಲೀಕರು ಕಡ್ಡಾಯವಾಗಿ ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.
ಹತ್ತಿ ಬಿಡಿಸುವ ಸಂದರ್ಭದಲ್ಲಿ ಹೆಚ್ಚಿನ ಮಕ್ಕಳು ಶಾಲೆಗೆ ಬರುವುದಿಲ್ಲ. ವಾರದವರೆಗೆ ಶಾಲೆಗೆ ಬರದ ಮಕ್ಕಳ ಪೋಷಕರ ಜೊತೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಮಾಲೋಚನೆ ನಡೆಸಿ, ಶಾಲೆಗೆ ಕರೆತರಬೇಕು. ಮಕ್ಕಳ ಸಹಾಯವಾಣಿ-1098 ಬಗ್ಗೆಮಕ್ಕಳಿಗೆ ತಿಳಿಸಬೇಕು ಎಂದು ಸೂಚಿಸಿದರು. ನೀತಿ ಆಯೋಗವು ರಾಜ್ಯದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಹತ್ವಾಕಾಂಕ್ಷೆ ಜಿಲ್ಲೆಗಳೆಂದು ಗುರುತಿಸಿದೆ. ಇದರಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಅಪೌಷ್ಟಿಕತೆ ನಿವಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಡೆದ ಮಾಹಿತಿಯನ್ನು ತಳಮಟ್ಟದಲ್ಲಿ ಕೆಲಸ ಮಾಡುವ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸಹಾಯಕರು, ಎಎನ್‌ಎಂ ಅವರಿಗೆ ತಲುಪಿಸಬೇಕು ಎಂದು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಚಂದ್ರಶೇಖರ ಅಲ್ಲಿಪುರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತರಾಯ ಕರಡ್ಡಿ ಉಪಸ್ಥಿತರಿದ್ದರು. ಜಿಲ್ಲಾ ಶಸ್ತ್ರಚಿಕಿತ್ಸಕ ಸಂಜೀವ್ ಕುಮಾರ ರಾಯಚೂರಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ಯುನಿಸೆಫ್ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಭಟ್ ಅಧಿಕಾರಿಗಳಿಗೆ ತರಬೇತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ ಪಾಟೀಲ ನಿರೂಪಿಸಿದರು.