ಹುಮನಾಬಾದ: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲಾದ ಹಿನ್ನೆಲೆಯಲ್ಲಿ ಚಿಟಗುಪ್ಪ ತಾಲೂಕಿನ ಮದರಗಿ ಗ್ರಾಮದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಸುಹಾಸಿನಿ ದಿಲೀಪ್ ಮಳಚಾಪುರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಚಿಟಗುಪ್ಪ ಪಟ್ಟಣದ ಶಾಹಿನ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಯುವತಿ ಪರೀಕ್ಷೆ ಫಲಿತಾಂಶದಲ್ಲಿ ರಸಾಯನಶಾಸ್ತ್ರ ಹಾಗೂ ಗಣಿತ ವಿಷಯದಲ್ಲಿ ಫೇಲ್ ಆಗಿರುವುದು ತಿಳಿದು ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಯುವತಿಯ ತಂದೆ ಮೃತಪಟ್ಟಿದ್ದು ತಾಯಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ನಿರ್ವಹಿತ್ತಿದ್ದಾಳೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.