Advertisement

ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ- ಆತಂಕದಲ್ಲಿ ಪಾಲಕರು

05:32 PM Sep 26, 2021 | Team Udayavani |

ಹುಮನಾಬಾದ: ಪಟ್ಟಣದಲ್ಲಿ ಭಾನುವಾರ ನಡೆದ ಜಾನಪದ ಸಮ್ಮೇಳನದ ಮೆರವಣಿಗೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪಿಯುಸಿ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

Advertisement

ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕ ವತಿಯಿಂದ ಏರ್ಪಡಿಸಿದ್ದ ಬೀದರ ಜಿಲ್ಲಾ ಜನಪದ ಕಲಾ ಸಮ್ಮೇಳನ ಮತ್ತು ರಾಷ್ಟ್ರೀಯ ಜನಪದ ನೃತ್ಯೋತ್ಸವ ಸಮಾರಂಭದ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದು, ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಕೊರೊನಾ ನಿಯಮಗಳು ಪಾಲಿಸುವಂತೆ ಸೂಚನೆಗಳು ನೀಡುತ್ತಿವೆ. ಶಾಲೆಗಳಲ್ಲಿ ಕೂಡ ಕೊವೀಡ್ ನಿಯಮಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳುತ್ತಿದ್ದು, ಇಲ್ಲಿ ಮಾತ್ರ ಯಾವುದೇ ನಿಯಮಗಳು ಪಾಲನೆಯಾಗುತ್ತಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ಯಾರು ಚಿಂತಿಸಬೇಕು? ಕಳೆದ ಒಂದು ತಿಂಗಳಿಂದ ಮಕ್ಕಳಲ್ಲಿ ಜ್ವರ ಕೆಮ್ಮು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ. ಮಕ್ಕಳಿಗೆ ಈವರೆಗೂ ಕೋವಿಡ್ ಲಸಿಕೆ ಬಂದಿಲ್ಲ. ಆದರೂ ಕೂಡ ಸಮ್ಮೇಳನದ ಮೆರವಣಿಗೆಯಲ್ಲಿ ಮಕ್ಕಳನ್ನು ಕರೆತಂದಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ:ಪ್ರೇಯಸಿಗೆ ನ್ಯಾಯ ಒದಗಿಸಿದ ಪೊಲೀಸರು:ಠಾಣೆಯಲ್ಲೇ ಮದುವೆ

ಈ ಕುರಿತು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ಸಂಪರ್ಕಿಸಿದಾಗ, ಸಮ್ಮೇಳನದ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಭಾಗವಹಿಸುವ ಕುರಿತು ಯಾವ ಶಾಲೆಯವರು ಪರವಾನಿಗಿ ಪಡೆದಿಲ್ಲ. ಕೊರೊನಾ ನಿಯಮಗಳು ಜಾರಿಯಲ್ಲಿರುವ ಕಾರಣ ಸಮ್ಮೇಳನದಲ್ಲಿ ಭಾಗವಹಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

ಅದೇ ರೀತಿ ತಹಶೀಲ್ದಾರ ನಾಗಾಯಾ ಹಿರೇಮಠ ಅವರನ್ನು ಸಂಪರ್ಕಿಸಿದ್ದು, ಸಮ್ಮೇಳನದ ಮೆರವಣಿಗೆಯಲ್ಲಿ  ಕೊರೊನಾ ನಿಯಮಗಳು ಪಾಲಿಸಬೇಕು ಎಂದು ಸೂಚಿಸಲಾಗಿತ್ತು. ಮಕ್ಕಳು ಭಾಗವಹಿಸಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸಿದ ಶಾಲೆ, ಕಾಲೇಜುಗಳಿಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಕ್ಕಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಉಂಟಾದರೆ ನೇರವಾಗಿ ಆಯಾ ಸಂಸ್ಥೆಗಳೇ ಕಾರಣವಾಗುತ್ತಾರೆ ಎಂದು ತಿಳಿಸಿದ್ದಾರೆ.

ಸಂಸ್ಕೃತಿ ಮಂತ್ರಾಲಯ ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮ ಇದ್ದಾಗಿದ್ದು, ವಿವಿಧ ರಾಜ್ಯಗಳ ಕಲಾವಿದರು ಭಾಗವಹಿಸಿದರು. ಅಲ್ಲದೇ ಭಾನುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಬೇರೆ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಹೆಚ್ಚಿನ ಆತಂಕ ಮೂಡುವಂತೆ ಮಾಡಿದೆ.

ದುರ್ಯೋಧನ ಹೂಗಾರ

Advertisement

Udayavani is now on Telegram. Click here to join our channel and stay updated with the latest news.

Next